Andolana originals

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ. ಇಲ್ಲಿನ ಹಸಿರು ಪರಿಸರ ಹಾಗೂ ಹಕ್ಕಿಗಳ ಕಲರವ ಜನರ ಮನಸ್ಸಿಗೆ ಮುದ ನೀಡುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆರೆ ಅಂಗಳದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿ ಹೆಚ್ಚಿದ್ದು, ಸಾರ್ವಜನಿಕರು ಆತಂಕದಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೆರೆಗೆ ಬರುವ ಕೆಲವರು ನಾಯಿಗಳಿಗೆ ಬಿಸ್ಕತ್ ಹಾಗೂ ಬನ್‌ಗಳನ್ನು ಹಾಕುತ್ತಿರುವುದರಿಂದ ನಾಯಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅತಿಯಾದ ಆಹಾರ ಸೇವನೆಯಿಂದ ಉದ್ರೇಕಗೊಳ್ಳುವ ಕೆಲವು ನಾಯಿಗಳು ವಾಯುವಿಹಾರಿಗಳ ಮೇಲೆ ಎರಗಲು ಪ್ರಯತ್ನಿಸುತ್ತಿವೆ. ಇದರೊಂದಿಗೆ, ಕೆಲವರು ಪಾರಿವಾಳಗಳಿಗೆ ಕಾಳುಗಳನ್ನು ಹಾಕುತ್ತಿರುವು ದರಿಂದ ಅಲ್ಲಿ ಅನಧಿಕೃತವಾಗಿ ಪ್ರಾಣಿ-ಪಕ್ಷಿಗಳಿಗೆ ಆಹಾರ ನೀಡುವ ಪ್ರವೃತ್ತಿ ಬೆಳೆದಿದೆ. ಈ ಎ ಕಾರಣಗಳಿಂದಾಗಿ ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳು ನೆಮ್ಮದಿಯಿಂದ ವಾಯುವಿಹಾರ ಮಾಡಲು ಸಾಧ್ಯವಾಗದಂತಹ ಸ್ಥಿತಿ ಉಂಟಾಗಿದೆ.

ಆದ್ದರಿಂದ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಕೆರೆ ಅಂಗಳದಲ್ಲಿ ಯಾವುದೇ ಪ್ರಾಣಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಅಲ್ಲದೆ, ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು.

-ಬಿ. ಗಣೇಶ, ಮೈಸೂರು 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

4 mins ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 mins ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

9 mins ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

15 mins ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

20 mins ago

ಜಂಬೂಸವಾರಿಯಲ್ಲಿ ಈ ಬಾರಿ ತಾರಾ ಮೆರುಗು

ಕೆ.ಬಿ.ರಮೇಶನಾಯಕ ರವಿಚಂದ್ರನ್, ಶಿವರಾಜ್‌ಕುಮಾರ್, ಯಶ್, ರಿಷಭ್ ಶೆಟ್ಟಿ, ರಚಿತಾ ರಾಮ್, ಸಪ್ತಮಿ ಗೌಡ ಸೇರಿ ೩೦ ಕಲಾವಿದರು ಭಾಗಿ ಮೈಸೂರು:…

27 mins ago