ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ ಭಿಕ್ಷೆ ಬೇಡುತ್ತಾರೆ. ತೃತೀಯ ಲಿಂಗಿಗಳು ವಾಹನ ಸವಾರರಿಂದ ಬಲವಂತವಾಗಿ ಹಣ ಪಡೆಯುತ್ತಿದ್ದು, ಕಿರಿಕಿರಿಯುಂಟು ಮಾಡುತ್ತಿದ್ದಾರೆ. ವೇಗವಾಗಿ ಚಲಿಸುವ ವಾಹನಗಳಿಗೆ ಸಿಲುಕಿ ಭಿಕ್ಷುಕರು ಅಪಘಾತಕ್ಕೀಡಾಗುವ ಸಾಧ್ಯತೆಯಿರುತ್ತದೆ. ಸಂಬಂಧಪಟ್ಟವರು ಕೂಡಲೇ ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕಾಗಿದೆ.
-ಜಿ.ಪಿ.ರಾಜೇಶ, ವಿ.ವಿ.ಪುರಂ, ಮೈಸೂರು



