ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆ ವಹಿಸಬೇಕೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿರುವುದು ಸ್ವಾಗತಾರ್ಹ.
ಆದರೆ ಆರ್‌ಟಿಓ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಸಾರ್ವಜನಿಕರು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ನೇರವಾಗಿ ಕಚೇರಿಗಳಿಗೆ ಹೋದರೆ ಸರಿಯಾದ ಮಾರ್ಗದರ್ಶನ ದೊರಕದೆ ಪರಿತಪಿಸುತ್ತಿದ್ದಾರೆ. ಇನ್ನು ಮುಂದಾದರೂ ಆರ್‌ಟಿಓ ಕಚೇರಿಗಳಲ್ಲಿ ಸಿಬ್ಬಂದಿ ಮತ್ತು ಅಽಕಾರಿಗಳು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಅಗತ್ಯ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು




