Mysore
30
few clouds

Social Media

ಶನಿವಾರ, 15 ಮಾರ್ಚ್ 2025
Light
Dark

ಓದುಗರ ಪತ್ರ: ವಾಹನ ದಟ್ಟಣೆ ನಿಯಂತ್ರಿಸಿ

ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ ರಸ್ತೆಗಳು ಕಿರಿದಾಗಿದ್ದು, ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ.

ಸೂರ್ಯ ಬೇಕರಿ ವೃತ್ತ ಹೆಚ್ಚು ವಾಹನ ದಟ್ಟಣೆಯಿಂದ ಕೂಡಿರುವ ಜತೆಗೆ ಜನನಿಬಿಡ ಪ್ರದೇಶವಾಗಿದೆ. ಇಂತಹ ಜಾಗದಲ್ಲಿ ರಸ್ತೆಗಳು ಕಿರಿದಾಗಿರುವ ಪರಿಣಾಮ ಹೆಚ್ಚು ಟ್ರಾಫಿಕ್ ಸಮಸ್ಯೆ ಕಾಡುತ್ತಿದ್ದು, ಈ ರಸ್ತೆಯಲ್ಲಿ ಓಡಾಡುವುದೇ ದೊಡ್ಡ ಸಾಹಸ ವಾಗಿಹೋಗಿದೆ. ಇನ್ನು ಈ ಸರ್ಕಲ್‌ನಲ್ಲಿ ಸಿಗ್ನಲ್ ಲೈಟ್ ವ್ಯವಸ್ಥೆಯೂ ಇಲ್ಲದಿರುವ ಪರಿಣಾಮ ನಿತ್ಯ ಒಂದಿಲ್ಲೊಂದು ಅಪಘಾತಗಳಾಗುತ್ತಿವೆ. ಆದ್ದರಿಂದ ಸಂಬಂಧಪಟ್ಟವರು ರಸ್ತೆ ಅಗಲೀಕರಣ ಮಾಡುವ ಜತೆಗೆ ವಾಹನ ದಟ್ಟಣೆ ನಿಯಂತ್ರಿಸಲು ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿ, ಸಂಚಾರ ಪೊಲೀಸರನ್ನು ನಿಯೋಜಿಸಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

Tags: