ಓದುಗರ ಪತ್ರ
ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ ರಸ್ತೆಗಳು ಕಿರಿದಾಗಿದ್ದು, ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ.
ಸೂರ್ಯ ಬೇಕರಿ ವೃತ್ತ ಹೆಚ್ಚು ವಾಹನ ದಟ್ಟಣೆಯಿಂದ ಕೂಡಿರುವ ಜತೆಗೆ ಜನನಿಬಿಡ ಪ್ರದೇಶವಾಗಿದೆ. ಇಂತಹ ಜಾಗದಲ್ಲಿ ರಸ್ತೆಗಳು ಕಿರಿದಾಗಿರುವ ಪರಿಣಾಮ ಹೆಚ್ಚು ಟ್ರಾಫಿಕ್ ಸಮಸ್ಯೆ ಕಾಡುತ್ತಿದ್ದು, ಈ ರಸ್ತೆಯಲ್ಲಿ ಓಡಾಡುವುದೇ ದೊಡ್ಡ ಸಾಹಸ ವಾಗಿಹೋಗಿದೆ. ಇನ್ನು ಈ ಸರ್ಕಲ್‌ನಲ್ಲಿ ಸಿಗ್ನಲ್ ಲೈಟ್ ವ್ಯವಸ್ಥೆಯೂ ಇಲ್ಲದಿರುವ ಪರಿಣಾಮ ನಿತ್ಯ ಒಂದಿಲ್ಲೊಂದು ಅಪಘಾತಗಳಾಗುತ್ತಿವೆ. ಆದ್ದರಿಂದ ಸಂಬಂಧಪಟ್ಟವರು ರಸ್ತೆ ಅಗಲೀಕರಣ ಮಾಡುವ ಜತೆಗೆ ವಾಹನ ದಟ್ಟಣೆ ನಿಯಂತ್ರಿಸಲು ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿ, ಸಂಚಾರ ಪೊಲೀಸರನ್ನು ನಿಯೋಜಿಸಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ…
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…
ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…