ಮೈಸೂರಿನ ಕುವೆಂಪುನಗರದ ಶಾಂತಿ ಸಾಗರ್ ಹೋಟೆಲ್‌ನಿಂದ ಸಮೀಪದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದವರೆಗಿನ ಕೇವಲ ಒಂದು ಫರ್ಲಾಂಗ್ ಅಂತರದ ರಸ್ತೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಕಡೆ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಈ ಗುಂಡಿಗಳು ಸುಮಾರು 1 ಅಡಿಯಷ್ಟು ಆಳವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿವೆ. ಅಲ್ಲದೆ ಇದು ಮುಖ್ಯ ರಸ್ತೆಯಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಕೆಲ ಬಾರಿ ವಾಹನ ಸವಾರರು ಈ ಗುಂಡಿಗಳನ್ನು ತಪ್ಪಿಸಲು ಹೋಗಿ ಅಪಘಾತಗಳಾಗಿರುವ ಉದಾಹರಣೆಗಳಿವೆ.
ಈಗ ಮಳೆಗಾಲವಾದ್ದರಿಂದ ಈ ಗುಂಡಿಗಳಿಗೆ ನೀರು ತುಂಬಿಕೊಂಡಿರುತ್ತದೆ. ಈ ವೇಳೆ ಗುಂಡಿ ಕಾಣದೆ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿರುವ ಉದಾಹರಣೆಗಳೂ ಇವೆ. ಆದ್ದರಿಂದ ಸಂಬಂಧಪಟ್ಟವರು ಈ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿಸಲು ಕ್ರಮವಹಿಸಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.