Andolana originals

ಓದುಗರ ಪತ್ರ| ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿಸಿ

ಮೈಸೂರಿನ ಕುವೆಂಪುನಗರದ ಶಾಂತಿ ಸಾಗರ್ ಹೋಟೆಲ್‌ನಿಂದ ಸಮೀಪದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದವರೆಗಿನ ಕೇವಲ ಒಂದು ಫರ್ಲಾಂಗ್ ಅಂತರದ ರಸ್ತೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಕಡೆ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಈ ಗುಂಡಿಗಳು ಸುಮಾರು 1 ಅಡಿಯಷ್ಟು ಆಳವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿವೆ. ಅಲ್ಲದೆ ಇದು ಮುಖ್ಯ ರಸ್ತೆಯಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಕೆಲ ಬಾರಿ ವಾಹನ ಸವಾರರು ಈ ಗುಂಡಿಗಳನ್ನು ತಪ್ಪಿಸಲು ಹೋಗಿ ಅಪಘಾತಗಳಾಗಿರುವ ಉದಾಹರಣೆಗಳಿವೆ.

ಈಗ ಮಳೆಗಾಲವಾದ್ದರಿಂದ ಈ ಗುಂಡಿಗಳಿಗೆ ನೀರು ತುಂಬಿಕೊಂಡಿರುತ್ತದೆ. ಈ ವೇಳೆ ಗುಂಡಿ ಕಾಣದೆ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿರುವ ಉದಾಹರಣೆಗಳೂ ಇವೆ. ಆದ್ದರಿಂದ ಸಂಬಂಧಪಟ್ಟವರು ಈ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿಸಲು ಕ್ರಮವಹಿಸಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago