ಮೈಸೂರು-ಚಾಮರಾಜನಗರ ನಡುವೆ ಸಂಚರಿಸುವ ರೈಲಿನಲ್ಲಿ ಧೂಮಪಾನ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಪ್ರಯಾಣಿಕರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ. ನಿತ್ಯ ಈ ರೈಲಿನಲ್ಲಿ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಸೇರಿದಂತೆ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ. ಆದರೆ ಮಧ್ಯಾಹ್ನ ೩.೩೦ರ ವೇಳೆಗೆ ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುವ ರೈಲಿನ ಸಾಮಾನ್ಯ ಬೋಗಿಗಳಲ್ಲಿ ಟಿಕೆಟ್ ತಪಾಸಣೆ ಮಾಡಲು ಯಾವುದೇ ಅಧಿಕಾರಿಗಳು ಬಾರದೆ ಇರುವ ಪರಿಣಾಮ ಕೆಲವರು ರೈಲಿನ ಶೌಚಾಲಯಗಳು ಹಾಗೂ ಬಾಗಿಲ ಬಳಿ ನಿಂತು ಧೂಮಪಾನ ಹಾಗೂ ಮದ್ಯಪಾನ ಮಾಡುತ್ತಾರೆ.
ಈ ವಿಚಾರವನ್ನು ರೈಲ್ವೆ ಅಧಿಕಾರಿಗಳ ಗಮನಕ್ಕೆ ತಂದರೂ ಅವರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದರಿಂದಾಗಿ ಪ್ರಯಾಣಿಕರಿಗೆ ಮುಜುಗರವಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ರೈಲಿನಲ್ಲಿ ಧೂಮಪಾನ, ಮದ್ಯಪಾನ ಮಾಡುವವರಿಗೆ ಕಡಿವಾಣ ಹಾಕಬೇಕಿದೆ.
–ನಾಗೇಶ್, ಮಾನಸಗಂಗೋತ್ರಿ, ಮೈಸೂರು



