Mysore
21
mist

Social Media

ಬುಧವಾರ, 14 ಜನವರಿ 2026
Light
Dark

ಓದುಗರ ಪತ್ರ: ಚಿನ್ನ , ಬೆಳ್ಳಿ ದರ ಏರಿಕೆಗೆ ಕಡಿವಾಣ ಹಾಕಿ

ಓದುಗರ ಪತ್ರ

ಪ್ರತಿಯೊಬ್ಬರೂ ಇಷ್ಟಪಡುವ ವಸ್ತುಗಳಲ್ಲಿ ಚಿನ್ನ ಪ್ರಮುಖವಾಗಿದೆ. ಮಧ್ಯಮ ವರ್ಗದ ಜನರು ಪೈಸೆ ಪೈಸೆ ಕೂಡಿಟ್ಟು ಚಿನ್ನ ಖರೀದಿಸುತ್ತಿದ್ದು, ಮದುವೆ ಮೊದಲಾದ ಶುಭ ಸಮಾರಂಭಗಳಲ್ಲಿ ಹಾಗೂ ಆಪತ್ಕಾಲದಲ್ಲಿ ಚಿನ್ನ ಉಪಯೋಗಕ್ಕೆ ಬರುತ್ತದೆ.

ಆದರೆ ಇತ್ತೀಚಿನ ದಿನಗಳಲ್ಲಿ ಚಿನ್ನ ಯಾರೂ ಊಹಿಸದ ರೀತಿಯಲ್ಲಿ ತನ್ನ ಬೆಲೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಜನವರಿಯಿಂದ ಮೇವರೆಗೂ ಮದುವೆ ಸಮಾರಂಭಗಳು ನಡೆಯಲಿದ್ದು, ಈ ಸಂದರ್ಭದಲ್ಲಿ ಚಿನ್ನಾಭರಣಗಳ ಬೆಲೆ ಹೆಚ್ಚಳವಾಗುತ್ತಿರುವುದು ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಬೆಳ್ಳಿ ಕೂಡ ಪೂಜನೀಯ ಲೋಹವಾಗಿ ಬಳಕೆಯಲ್ಲಿದ್ದು, ಬೆಳ್ಳಿಯ ಅನೇಕ ಪರಿಕರಗಳನ್ನು ದಿನಬಳಕೆಯಲ್ಲಿ ಜನ ಬಳಸುತ್ತಿದ್ದಾರೆ. ಬೆಳ್ಳಿಯ ಕಾಲ್ಗೆಜ್ಜೆ, ಬೆಳ್ಳಿಯ ಆಭರಣಗಳು, ಪೂಜಾ ಸಾಮಗ್ರಿಗಳನ್ನು ಗ್ರಾಹಕರು ಖರೀದಿಸುತ್ತಿದ್ದಾರೆ. ಚಿನ್ನದಂತೆ ಬೆಳ್ಳಿಯ ಬೆಲೆ ಕೂಡ ದಿನನಿತ್ಯ ಏರಿಕೆಯಗುತ್ತಿದೆ.

ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಈ ಚಿನ್ನ ಹಾಗೂ ಬೆಳ್ಳಿಯ ದರಗಳಿಗೆ ಕಡಿವಾಣ ಹಾಕಿ, ಬಡ ಹಾಗೂ ಮಧ್ಯಮ ವರ್ಗದ ಜನರ ಕೈಗೆ ಎಟುಕುವ ನಿಟ್ಟಿನಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳಲ್ಲಿ ಸ್ಥಿರತೆಯನ್ನು ಕಾಪಾಡುವುದು ಅವಶ್ಯವಾಗಿದೆ.

 -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

Tags:
error: Content is protected !!