ಓದುಗರ ಪತ್ರ
ರಾಜ್ಯಾದ್ಯಂತ ಇ -ಖಾತಾ ಅಭಿಯಾನ ಬಿರುಸಿನಿಂದ ನಡೆಯುತ್ತಿದೆ. ವಿವಿಧ ನಗರ ಪಾಲಿಕೆಗಳು, ತಾಲ್ಲೂಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಇ- ಖಾತೆಯನ್ನು ಮಾಡಿ ಕೊಡಲಾಗುತ್ತಿದೆ. ಆದರೆ ಇ -ಖಾತೆಗಳನ್ನು ಮಾಡಿಕೊಡಲು ಸಂಬಂಧಪಟ್ಟ ಅಧಿಕಾರಿ ಹಾಗೂ ಇತರ ನೌಕರ ವರ್ಗದವರಿಗೆ ಲಂಚ ಕೊಡುವುದು ಅನಿವಾರ್ಯ ಎನ್ನುವಂತಾಗಿದೆ. ಇದರ ಜೊತೆಗೆ ಇ- ಖಾತೆಗಳನ್ನು ಮಾಡಿಸಿಕೊಡುವುದಾಗಿ ದಲ್ಲಾಳಿಗಳು ಆಸ್ತಿ ಮಾಲೀಕರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿದ್ದಾರೆ.
ಸರ್ಕಾರದ ಅನೇಕ ಯೋಜನೆಗಳು ಪರೋಕ್ಷವಾಗಿ ಲಂಚಕೋರ ನೌಕರ ವರ್ಗದವರಿಗೆ ವರದಾನವಾಗಿ ಪರಿಣಮಿಸಿರುವುದು ದುರದೃಷ್ಟಕರ ಸಂಗತಿ. ಇ -ಖಾತಾ ಅರ್ಜಿ ಸಲ್ಲಿಕೆ ಕೆಲವು ಕಡೆ ಆನ್ ಲೈನ್ ಆಗಿರುವುದು ಒಳ್ಳೆಯ ಬೆಳವಣಿಗೆಯಾದರೂ ಲಂಚಕೋರ ಅಧಿಕಾರಿಗಳು ಹಾಗೂ ನೌಕರ ವರ್ಗದವರು ಬೇರೆ ಬೇರೆ ದಾರಿಗಳನ್ನು ಹುಡುಕಿಕೊಂಡಿರುತ್ತಾರೆ. ಕಂದಾಯ ಸಚಿವರು ಕೂಡಲೇ ಲಂಚದ ಹಾವಳಿಗೆ ಕಡಿವಾಣ ಹಾಕಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…