ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳ ಅಂಚಿನಲ್ಲಿರುವ ಎಚ್.ಡಿ.ಕೋಟೆ, ಸರಗೂರು ಹಾಗೂ ನಂಜನಗೂಡು ತಾಲ್ಲೂಕುಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಜೀವಹಾನಿಗಳಾಗುತ್ತಿವೆ. ಇತ್ತೀಚೆಗೆ ಎಚ್.ಡಿ. ಕೋಟೆ ಪಟ್ಟಣದ ಸಮೀಪರೆ 3-4 ಹುಲಿಗಳು ಒಟ್ಟಿಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದರೆ, ಒಂದೇ ತಿಂಗಳಿನಲ್ಲಿ ನಾಲ್ಕು ಚಿರತೆಗಳು ಅರಣ್ಯ ಇಲಾಖೆಯ ಬೋನಿನಲ್ಲಿ ಬಿದ್ದಿರುವುದು ಜನರನ್ನು ಭಯಭೀತರನ್ನಾಗಿಸಿದೆ. ಇನ್ನು ಸರಗೂರು ಭಾಗದಲ್ಲಂತೂ ಆಗಾಗ್ಗೆ ಕಾಡಾನೆ ಹಾಗೂ ಹುಲಿಗಳ ದಾಳಿ ನಡೆಯುತ್ತಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯ ಜತೆಗೆ ಅನೇಕ ರೈತರೂ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಿಗೆ ಸರಗೂರಿನ ಹೆಗ್ಗನೂರು ಗ್ರಾಮದಲ್ಲಿಯೂ ನಿರಂತರವಾಗಿ ಹುಲಿಯೊಂದು ದಾಳಿ ನಡೆಸಿ ನಾಲ್ಕೈದು ಜಾನುವಾರುಗಳನ್ನು ಬಲಿಪಡೆದಿತ್ತು. ಇತ್ತ ನಂಜನಗೂಡಿನ ಬಳ್ಳೂರು ಹುಂಡಿ ಗ್ರಾಮದಲ್ಲಿ ವರ್ಷದ ಹಿಂದೆ ರತ್ನಮ್ಮ ಎಂಬವರ ಮೇಲೆ ಹುಲಿಯೊಂದು ದಾಳಿ ನಡೆಸಿ ಬಲಿ ಪಡೆದಿತ್ತು. ಈಗ ಅದೇ ಸ್ಥಳದಲ್ಲಿ ಹುಲಿ ಹಸುವೊಂದನ್ನು ಬಲಿ ಪಡೆದಿದೆ. ಇತ್ತೀಚೆಗೆ ಕಾಡಂಚಿನ ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜನರು ಜಮೀನುಗಳಿಗೆ ಹೋಗಲು, ರಾತ್ರಿ ವೇಳೆ ರಸ್ತೆಯಲ್ಲಿ ತಿರುಗಾಡಲೂ ಆತಂಕ ಪಡುವಂತಾಗಿದೆ. ಕಾಡುಪ್ರಾಣಿಗಳು ಕಾಣಿಸಿಕೊಂಡಾಗ ಅರಣ್ಯ ಇಲಾಖೆಯವರು ಅವುಗಳನ್ನು ಹಿಡಿಯುವ ಭರವಸೆ ನೀಡುತ್ತಾರಾದರೂ ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟಲು ಕ್ರಮವಹಿಸುವುದಿಲ್ಲ. ಆದ್ದರಿಂದ ಆಯಾ ಭಾಗದ ಶಾಸಕರು ಈ ಬಗ್ಗೆ ಗಮನಹರಿಸಿ ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಬೇಕಿದೆ.
-ಸಂಜಯ್, ಎಚ್.ಡಿ.ಕೋಟೆ ತಾ.
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…
ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…
ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…
ಟಿ-೨೦ವಿಶ್ವಕಪ್‌ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…