ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯಿರುತ್ತದೆ. ಮೈಸೂರು ನಗರ ಪಾಲಿಕೆ ಅಧಿಕಾರಿಗಳು ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದವರು ವಿದ್ಯುತ್ ತಂತಿಗಳಿಗೆ ತಾಗುತ್ತಿರುವ ಮರದ ಕೊಂಬೆಗಳನ್ನು ಕೂಡಲೇ ತೆರವುಗೊಳಿಸುವ ಮೂಲಕ ಸಾರ್ವಜನಿಕರ ಹಿತವನ್ನು ಕಾಪಾಡಬೇಕಾಗಿದೆ.
-ಎಂ.ಪಿ.ಜಸ್ವಂತ್‌ಸಿಂಗ್, ಪ್ರಥಮ ವರ್ಷದ ಎಂ.ಎ. ಪತ್ರಿಕೋದ್ಯಮ, ಮಾನಸಗಂಗೋತ್ರಿ





