Andolana originals

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ ಪಾಲಾಗಿದೆ ಎಂದು ಅಧಿಕೃತವಾಗಿ ವರದಿಯಾಗಿದೆ. ಆಶ್ಚರ್ಯಕರ ಸಂಗತಿ ಎಂದರೆ ಈ ರೀತಿಯ ವಂಚನೆಗೆ ಒಳಗಾದವರು, ನಿವೃತ್ತ ನೌಕರರು, ಅತಿ ಹೆಚ್ಚು ವಿದ್ಯಾವಂತರು, ಹಿರಿಯ ನಾಗರಿಕರು ಮತ್ತು ಗೃಹಿಣಿಯರು. ಅಲ್ಲದೇ ಅತಿ ಹೆಚ್ಚು ಸೈಬರ್ ಪ್ರಕರಣಗಳು ಕರ್ನಾಟಕದಿಂದಲೇ ದಾಖಲಾಗುತ್ತಿರುವುದು ಆತಂಕಕಾರಿ ಬೆಳವಣಿಗೆ.

ಹಿಂದಿ ಭಾಷೆಯಲ್ಲಿ ಮಾತನಾಡುವ ಅಪರಿಚಿತ ವ್ಯಕ್ತಿ ಕರೆ ಮಾಡಿ, ನೀವು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ನಿಮ್ಮ ಹಣ ಒಂದು ವರ್ಷದ ಡಬ್ಬಲ್ ಆಗುತ್ತದೆ ಎಂದು ನಂಬಿಸಿ, ನಿಮ್ಮ ಮೊಬೈಲ್ ಸಂಖ್ಯೆಗೆ ಲಿಂಕ್ ಕಳುಹಿಸುತ್ತಾರೆ. ಲಿಂಕ್ ಅನ್ನು ಒತ್ತಿ ನಿಮ್ಮ ಪಾನ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಲು ಹೇಳುತ್ತಾರೆ. ಇವರನ್ನು ನಂಬಿ, ನಿಮ್ಮ ಪಾನ್ ಕಾರ್ಡ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು ಕೊಟ್ಟರೇ ಸಾಕು ನಿಮ್ಮ ಯಾವುದೇ ಬ್ಯಾಂಕಿನ ಎಸ್‌ಬಿ ಅಕೌಂಟ್‌ನಲ್ಲಿರುವ ಎಲ್ಲ ಹಣವೂ ಹತ್ತೇ ನಿಮಿಷಗಳಲ್ಲಿ ಮಾಯವಾಗಿರುತ್ತದೆ. ಅಪರಿಚಿತ ವ್ಯಕ್ತಿಯ ಕರೆಗಳನ್ನು ಸ್ವೀಕರಿಸಬೇಡಿ ಎಂದು ಪೊಲೀಸ್ ಇಲಾಖೆ ಮತ್ತು ಬ್ಯಾಂಕ್‌ಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದರೂ ಜನರು ಪಾಠ ಕಲಿತಂತಿಲ್ಲ.

 -ಬೂಕನಕೆರೆ ವಿಜೇಂದ್ರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

52 mins ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

54 mins ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

56 mins ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

1 hour ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

1 hour ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

1 hour ago