ನಂಜನಗೂಡಿನಲ್ಲಿ ನಿರ್ಮಾಣವಾಗಿರುವ ಮೈಸೂರು – ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿನ ಚಾಮರಾಜನಗರಕ್ಕೆ ಹೋಗುವ ಬೈಪಾಸ್ ರಸ್ತೆಯ ಮೇಲ್ಸೇತುವೆಗೆ, ವಿ. ಶ್ರೀನಿವಾಸ ಪ್ರಸಾದ್ ಹೆಸರಿಡಬೇಕು ಎಂದು ಅವರ ಅಭಿಮಾನಿಗಳು ಒತ್ತಾಯಿಸಿದರೆ , ಆರ್. ಧ್ರುವನಾರಾಯಣ ಅವರ ಹೆಸರಿಡಬೇಕು ಎಂದು ಅವರ ಅಭಿಮಾನಿಗಳಿಂದ ಒತ್ತಾಯ ಕೇಳಿ ಬಂದಿತ್ತು.
ಆದರೆ ಶಾಸಕ ದರ್ಶನ್ ಧ್ರುವ ನಾರಾಯಣ್ ಅವರು ಕೇಂದ್ರದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಅವರ ಹೆಸರನ್ನು ಮೇಲ್ಸೇತುವೆಗೆ ನಾಮಕರಣ ಮಾಡಿ ಪ್ರಬುದ್ಧತೆಗೆ ಸಾಕ್ಷಿಯಾಗಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಮೈಸೂರಿನ ಕೆಲವು ವೃತ್ತ ಹಾಗೂ ರಸ್ತೆಗಳಿಗೆ ನಾಮಕರಣ ಮಾಡುವ ವಿಚಾರವಾಗಿ ಪರ- ವಿರೋಧ ವ್ಯಕ್ತವಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇಂತಹ ಸಂದರ್ಭಲ್ಲಿ ಶಾಸಕ ದರ್ಶನ್ ಅವರು ಶ್ರೀನಿವಾಸ ಪ್ರಸಾದ್ ಅವರ ಜನಪರ ಸೇವೆಯನ್ನು ಮನಗಂಡು ಮೇಲ್ಸೇತುವೆಗೆ ಅವರ ಹೆಸರನ್ನು ನಾಮಕರಣ ಮಾಡಿರುವುದು ಶ್ಲಾಘನೀಯ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು





