ಓದುಗರ ಪತ್ರ
ಮೈಸೂರು ದಸರಾ ಉದ್ಘಾಟನೆಯನ್ನು ಸಾಹಿತಿ ಬಾನು ಮುಷ್ತಾಕ್ ಅವರು ಮಾಡಬಾರದೆಂದು ಹೈಕೋರ್ಟ್‌ನಲ್ಲಿ ಮಾಜಿ ಸಂಸದರೊಬ್ಬರು ಹಾಗೂ ಸಾರ್ವಜನಿಕರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಬಾನು ಮುಷ್ತಾಕ್ ಅವರ ಆಯ್ಕೆ ಸಂವಿಧಾನಬದ್ಧವಾಗಿದೆ ಎಂದುಹೈಕೋರ್ಟ್ ಅರ್ಜಿಯನ್ನು ವಜಾಮಾಡಿದ್ದು, ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಬೇರೆ ಧರ್ಮಿಯರಾದ ಕವಿ ನಿಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಿದ್ದರು.
ಆಗ ಯಾವುದೇ ಅಪಸ್ವರ ಇರಲಿಲ್ಲ. ಬಾನು ಮುಷ್ತಾಕ್ ಮಹಿಳೆ ಎಂಬ ಕಾರಣಕ್ಕೆ, ಪಿತೃಪ್ರದಾನ ಕೊಳಕು ಮನಸ್ಸಿನ ಸನಾತನಿಗಳು ಕೋರ್ಟ್ ಮೆಟ್ಟಿಲೇರಿದ್ದರು. ಭಾರತಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷಗಳೇ ಕಳೆದಿದ್ದರೂ ಮಹಿಳೆಯನ್ನು ಇಂದಿಗೂ ಎರಡನೇ ದರ್ಜೆ ಪ್ರಜೆಯಾಗಿ ಎಲ್ಲ ಧರ್ಮಗಳೂ ತುಳಿಯುತ್ತಿವೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ.
ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗಾಗಿ ಆಯ್ಕೆ ಮಾಡಿದ ಪ್ರಗತಿಪರ ಮುಖ್ಯಮಂತ್ರಿಗಳಿಗೆ, ಆಯ್ಕೆ ಸಂವಿಧಾನಬದ್ಧವಾಗಿದೆ ಎಂದು ಅರ್ಜಿಯನ್ನು ವಜಾ ಮಾಡಿದ ನ್ಯಾಯಾಲಯಕ್ಕೆ ಹಾಗೂ ಸರ್ಕಾರದ ಪರವಾಗಿ ವಾದ ಮಂಡಿಸಿದ ವಕೀಲರಾದ ಶಶಿಕಿರಣ್ ಅವರಿಗೂ ಅಭಿನಂದನೆಗಳು.
-ರತ್ನ ಹುಲ್ಲಹಳ್ಳಿ ವಕೀಲರು.
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…
ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…