ಓದುಗರ ಪತ್ರ
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ, ಹಾವೇರಿ, ಮೈಸೂರು, ಶಿವಮೊಗ್ಗ, ರಾಯಚೂರು ಹಾಗೂ ಚಿಕ್ಕಮಗಳೂರು ಜಿಗಳಲ್ಲಿ ಭೀಕರ ಬರ ಪರಿಸ್ಥಿತಿ ತಲೆದೋರಿದೆ. ಕೃಷಿ ಇಲಾಖೆಯ ಪ್ರಕಾರ ಶೇ.೭೦ ಕ್ಕೂ ಹೆಚ್ಚು ಬಿತ್ತನೆ ಪ್ರದೇಶಗಳು ಸಂಪೂರ್ಣ ಒಣಗಿಹೋಗಿವೆ.
ಸರ್ಕಾರವು ಎಸಿ ಕೊಠಡಿಗಳಲ್ಲಿ ಸಭೆ ನಡೆಸಿ ಅಂಕಿ-ಅಂಶಗಳ ಆಟ ಆಡುತ್ತಿದೆಯೇ ಹೊರತು, ನೆಲದ ಮೇಲಿನ ಬವಣೆ ಆಲಿಸುತ್ತಿಲ್ಲ. ಕುಡಿಯುವ ನೀರಿಲ್ಲದೆ ಗ್ರಾಮಗಳು ಖಾಲಿಯಾಗುತ್ತಿದ್ದು, ರೈತರು ಬದುಕಿಗಾಗಿ ಗುಳೆ ಹೋಗುತ್ತಿದ್ದಾರೆ. ಪರಿಹಾರ ಧನ ಬಿಡುಗಡೆಯಲ್ಲಿ ತಾರತಮ್ಯ ಮತ್ತು ವಿಳಂಬ ಧೋರಣೆ ಅಧಿಕಾರಿಗಳ ಬೇಜವಾಬ್ದಾರಿಯನ್ನು ಎತ್ತಿಹಿಡಿಯುವಂತಿದೆ.
ತಕ್ಷಣವೇ ಈ ಜಿಗಳನ್ನು ಬರಪೀಡಿತ ಎಂದು ಘೋಷಿಸಿ, ಕನಿಷ್ಠ ಬೆಂಬಲ ಬೆಲೆ ಹಾಗೂ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ರೈತರ ಬವಣೆಗಳನ್ನು ಅರಿತುಕೊಂಡು ಅವರ ಕಷ್ಟಗಳಿಗೆ ಸ್ಪಂದಿಸಬೇಕು.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…