Mysore
23
overcast clouds

Social Media

ಶುಕ್ರವಾರ, 06 ಮಾರ್ಚ್ 2026
Light
Dark

ಓದುಗರ ಪತ್ರ| ಹಾಡಿ ರಸ್ತೆ ಅಭಿವೃದ್ಧಿಪಡಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಕೆ.ಎಡತೊರೆ ಗ್ರಾಮದಿಂದ ಹನುಮಂತ ನಗರ ಗಿರಿಜನ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಕೆಸರುಮಯ ವಾಗಿದ್ದು, ಜನರು ಸಂಚಾರ ಮಾಡಲು ಪರದಾಡುವಂತಾಗಿದೆ.

ಹನುಮಂತ ನಗರ ಗಿರಿಜನ ಹಾಡಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಆದಿವಾಸಿ ಬುಡಕಟ್ಟು ಸಮುದಾಯದ ಕುಟುಂಬಗಳು ವಾಸವಾಗಿದ್ದು, ಈ ಹಾಡಿಗೆ ಇದೊಂದೇ ಸಂಪರ್ಕ ರಸ್ತೆಯಾಗಿದೆ. ಆದರೆ ಈ ರಸ್ತೆಯೂ ಸಂಪೂರ್ಣ ಮಣ್ಣಿನ ರಸ್ತೆಯಾಗಿದ್ದು, ಮಳೆಗಾಲ ಬಂತೂ ಎಂದರೆ ಈ ರಸ್ತೆಯಲ್ಲಿ ಸಂಚರಿಸುವುದೇ ಸಾಹಸಮಯ ಕೆಲಸವಾಗಿದೆ. ಸದ್ಯ ಈಗ ಮಳೆಗಾಲವಾಗಿದ್ದು, ರಸ್ತೆ ಕೆಸರಿನ ಗದ್ದೆಯಂತಾಗಿದೆ. ಇಂತಹ ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರು ಹಾಗೂ ಪಾದಚಾರಿಗಳು ಜಾರಿ ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ.

ಈ ಹಿಂದೆ ಶಾಸಕ ಅನಿಲ್ ಚಿಕ್ಕಮಾದುರವರು ಇಲ್ಲಿಗೆ ಭೇಟಿ ನೀಡಿದ್ದಾಗ ರಸ್ತೆ ಅಭಿವೃದ್ಧಿ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದರು. ಅವರು ಈ ಬಾರಿಯಾದರೂ ಭರವಸೆಯಂತೆ ರಸ್ತೆ ದುರಸ್ತಿ ಮಾಡಿಕೊಡಬೇಕು ಎಂಬುದು ಇಲ್ಲಿನ ಜನರ ಬೇಡಿಕೆಯಾಗಿದೆ.

-ಕೆ.ಎಸ್.ಹರೀಶ್‌ ಗೌಡ, ಕೆ.ಎಡತೊರೆ, ಎಚ್.ಡಿ.ಕೋಟೆ ತಾ.

Tags:
error: Content is protected !!