Andolana originals

ಓದುಗರ ಪತ್ರ: ಕುವೆಂಪುನಗರ ಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿಪಡಿಸಿ

ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ನೂರಾರು ಓದುಗರು ಇಲ್ಲಿಗೆ ಬಂದು ಅಭ್ಯಾಸ ಮಾಡುತ್ತಾರೆ. ಮೈಸೂರಿನ ಪೀಪಲ್ಸ್ ಪಾರ್ಕ್ ನಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯವನ್ನು ಹೊರತುಪಡಿಸಿದರೆ, ಅತಿ ಹೆಚ್ಚಿನ ಓದುಗರನ್ನು ಹೊಂದಿರುವ ಗ್ರಂಥಾಲಯ ಇದಾಗಿದೆ.

ಆದರೆ ಇಲ್ಲಿ ಸ್ಥಳದ ಅಭಾವದಿಂದಾಗಿ ಹಿರಿಯ ನಾಗರಿಕರು ಇಕ್ಕಟ್ಟಿನಲ್ಲಿ, ನಿಂತುಕೊಂಡೇ ದಿನ ಪತ್ರಿಕೆಗಳನ್ನು ಓದುವಂತಾಗಿದೆ. ಈ ಗ್ರಂಥಾಲಯದ ಅರ್ಧ ಭಾಗವು ವಿದ್ಯಾರ್ಥಿಗಳು ಓದಲು ಮೀಸಲಾಗಿದೆ. ಇಲ್ಲಿ ಸ್ಥಳದ ಅಭಾವಿರುವುದರಿಂದ ಈ ಗ್ರಂಥಾಲಯದ ಮೇಲೆ ಮೊದಲ ಮಹಡಿಯನ್ನು ನಿರ್ಮಾಣ ಮಾಡಿ, ಅಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಅನುಕೂಲ ಮಾಡಿಕೊಡಬೇಕು ಹಾಗೂ ಈಗ ಗ್ರಂಥಾಲಯದ ಒಳ ಭಾಗದಲ್ಲಿರುವ ಶೌಚಾಲಯವನ್ನು ಸಕಾಲಕ್ಕೆ ಸ್ವಚ್ಛಗೊಳಿಸದೇ ಇರುವುದರಿಂದ ಓದುಗರು ದುರ್ವಾಸನೆಯಿಂದ ಬಳಲುವಂತಾಗಿದೆ. ಸಂಬಂಧಪಟ್ಟವರು ಕೂಡಲೇ ಶೌಚಾಲಯವನ್ನು ಗ್ರಂಥಾಲಯದ ಹೊರಭಾಗದಲ್ಲಿ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಹೊರಗೆ ಸಾಕಷ್ಟು ಜಾಗ ಇರುವುದರಿಂದ, ಗ್ರಂಥಾಲಯದ ಹೊರ ಭಾಗಕ್ಕೆ ಶೌಚಾಲಯವನ್ನು, ಸ್ಥಳಾಂತರ ಮಾಡಬೇಕು.

 -ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು

 

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

12 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

13 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

13 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

13 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

13 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

17 hours ago