ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ಸಮೀಪದ ಗುಡುಮಾನಹಳ್ಳಿ ಕೆರೆಯ ಏರಿಯ ಮೇಲಿನ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಈ ಕೆರೆ ಸುಮಾರು 300-400 ಎಕರೆ ಕೃಷಿ ಭೂಮಿಗೆ ನೀರು ಪೂರೈಕ ಮಾಡುತ್ತಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಭತ್ತ, ಜೋಳ, ಕಬ್ಬು, ಶುಂಠಿ ಹಾಗೂ ಇತರೆ ಬೆಳೆಗಳನ್ನು ಕಟಾವು ಮಾಡಿದ ನಂತರ ಇದೇ ಮಾರ್ಗವಾಗಿ ಮಾರುಕಟ್ಟೆಗಳಿಗೆ ರವಾನೆ ಮಾಡಬೇಕು,
ಅಲ್ಲದೆ ಈ ರಸ್ತೆ ಮಾಲಾರ ಕಾಲೋನಿ, ಮಂಡ್ಯ ಶೆಡ್ಡು ಹಾಗೂ ಎಚ್.ಡಿ.ಕೋಟೆಗೂ ಸಂಪರ್ಕ ಕಲ್ಪಿಸುವುದರಿಂದ ಹೆಚ್ಚಿನ ಜನರು ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ. ಅದರೆ ಈ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿವೆ.
ಅಲ್ಲದೆ ರಸ್ತೆ ಸಂಪೂರ್ಣವಾಗಿ ಕೆಸರುಮಯವಾಗಿರುವುದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವಂತಾಗಿದ್ದು, ಸಂಬಂಧಪಟ್ಟವರು ಕೂಡಲೇ ರಸ್ತೆಯನ್ನು ಅಭಿವೃದ್ಧಿಪಡಿಸಬೇಕಿದೆ.
-ಸಿದ್ಧಲಿಂಗೇಗೌಡ ಹೈರಿಗೆ, ಎಚ್.ಡಿ.ಕೋಟೆ ತಾ.