ಓದುಗರ ಪತ್ರ
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಮೆರುಗು ತಂದುಕೊಟ್ಟಿದ್ದ ಸಾಂಸ್ಕೃತಿಕ ನಗರಿಯ ಪರಂಪರೆ ಸಾರುವ ನಾಡ ಕುಸ್ತಿ ಕಲೆಯನ್ನು ಉಳಿಸಿ ಬೆಳೆಸುವ ಕಾಳಜಿ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಇಲ್ಲವಾಗಿದೆ ಎಂದು ಹಿರಿಯ ಕುಸ್ತಿ ಪೈಲ್ವಾನರು ಕಳವಳ ವ್ಯಕ್ತಪಡಿಸಿರುವುದು ಬೇಸರದ ಸಂಗತಿ.
ಮೈಸೂರು ರಾಜ ಮನೆತನ ನೀಡಿದ ಪ್ರೋತ್ಸಾಹದಿಂದಾಗಿ ದೇಶ – ವಿದೇಶಗಳಲ್ಲಿ ಕುಸ್ತಿ ಕಲೆಯನ್ನು ಜನಪ್ರಿಯಗೊಳಿಸಿದ್ದ ಮೈಸೂರಿನ ಪೈಲ್ವಾನರ ಸಾಹಸ ಎಂದಿಗೂ ಮರೆಯಲಾಗುವುದಿಲ್ಲ. ಆದರೆ ಶ್ರೇಷ್ಠ ಪೈಲ್ವಾನರನ್ನು ನೀಡಿದ ಮೈಸೂರಿನ ಗರಡಿ ಮನೆಗಳನ್ನು ವರ್ಷದಿಂದ ವರ್ಷಕ್ಕೆ ಅವಾಸನದ ಅಂಚಿಗೆ ಸರಿಯುತ್ತಿರುವುದು ವಿಪರ್ಯಾಸವೇ ಸರಿ.
ಮಹಾರಾಜರ ಆಳ್ವಿಕೆಯಲ್ಲಿ ನೂರಾರು ಕಡೆ ಇದ್ದ ಗರಡಿ ಮನೆಗಳು ಈಗ ಕೆಲವು ಕಡೆ ಮಾತ್ರ ಇವೆ. ಇನ್ನಾದರೂ ಸರ್ಕಾರ, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಗರಡಿ ಮನೆಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಕುಸ್ತಿ ಕಲೆಯನ್ನು ಉಳಿಸಿ ಬೆಳೆಸಲು ಕ್ರಮ ಕೈಗೊಳ್ಳಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…
ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು…
ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…
ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು :…
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…
ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…