Mysore
30
few clouds

Social Media

ಗುರುವಾರ, 19 ಫೆಬ್ರವರಿ 2026
Light
Dark

ಓದುಗರ ಪತ್ರ: ಧರ್ಮಸ್ಥಳ ಪ್ರಕರಣ; ಸರ್ಕಾರದ ಕ್ರಮ ಸ್ವಾಗತಾರ್ಹ

ಓದುಗರ ಪತ್ರ

ಪವಿತ್ರ ಯಾತ್ರಾ ಸ್ಥಳವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿರುವುದು ಸ್ವಾಗತಾರ್ಹ. ಈ ಪ್ರಕರಣಗಳ ಸತ್ಯಾಸತ್ಯತೆಗಳು ಏನೇ ಇರಲಿ, ಯಾವುದೇ ವ್ಯಕ್ತಿ ಹಾಗೂ ಸ್ಥಳ ಸಂವಿಧಾನದ ಚೌಕಟ್ಟಿನಿಂದ ಹೊರತಾಗಿರಲು ಸಾಧ್ಯವಿಲ್ಲ. ಕಾನೂನಿನಡಿಯಲ್ಲಿ ಎಲ್ಲರೂ ಸಮಾನರು.

ಈ ಘಟನೆಗಳಿಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬುದು ಸಾರ್ವಜನಿಕರ ನಿರೀಕ್ಷೆಯಾಗಿದೆ. ಈ ಪ್ರಕರಣಗಳು ಹಲವು ವರ್ಷಗಳ ಹಿಂದೆ ನಡೆದಿವೆ ಎನ್ನಲಾಗಿದ್ದು, ಎಸ್‌ಐಟಿಯು ಯಾವುದೇ ಹಸ್ತಕ್ಷೇಪಗಳಿಗೆ ಆಸ್ಪದ ನೀಡದೆ, ಪ್ರಭಾವಗಳಿಗೆ ಮಣಿಯದೆ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿಷ್ಪಕ್ಷಪಾತವಾದ ತನಿಖೆ ನಡೆಸಿ ಸತ್ಯವನ್ನು ಆದಷ್ಟು ಬೇಗ ಹೊರತರಬೇಕಿದೆ.

– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

Tags:
error: Content is protected !!