ಓದುಗರ ಪತ್ರ
ಪವಿತ್ರ ಯಾತ್ರಾ ಸ್ಥಳವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿರುವುದು ಸ್ವಾಗತಾರ್ಹ. ಈ ಪ್ರಕರಣಗಳ ಸತ್ಯಾಸತ್ಯತೆಗಳು ಏನೇ ಇರಲಿ, ಯಾವುದೇ ವ್ಯಕ್ತಿ ಹಾಗೂ ಸ್ಥಳ ಸಂವಿಧಾನದ ಚೌಕಟ್ಟಿನಿಂದ ಹೊರತಾಗಿರಲು ಸಾಧ್ಯವಿಲ್ಲ. ಕಾನೂನಿನಡಿಯಲ್ಲಿ ಎಲ್ಲರೂ ಸಮಾನರು.
ಈ ಘಟನೆಗಳಿಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬುದು ಸಾರ್ವಜನಿಕರ ನಿರೀಕ್ಷೆಯಾಗಿದೆ. ಈ ಪ್ರಕರಣಗಳು ಹಲವು ವರ್ಷಗಳ ಹಿಂದೆ ನಡೆದಿವೆ ಎನ್ನಲಾಗಿದ್ದು, ಎಸ್‌ಐಟಿಯು ಯಾವುದೇ ಹಸ್ತಕ್ಷೇಪಗಳಿಗೆ ಆಸ್ಪದ ನೀಡದೆ, ಪ್ರಭಾವಗಳಿಗೆ ಮಣಿಯದೆ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿಷ್ಪಕ್ಷಪಾತವಾದ ತನಿಖೆ ನಡೆಸಿ ಸತ್ಯವನ್ನು ಆದಷ್ಟು ಬೇಗ ಹೊರತರಬೇಕಿದೆ.
– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…
ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…