Andolana originals

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ವಿವಾದಕ್ಕೆ ನ್ಯಾಯಾಲಯದ ಹೋರಾಟದ ಬದಲು ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ತಜ್ಞರು ಮುಖಾಮುಖಿಯಾಗಿ ಸೌಹಾರ್ದಯುತ ಮಾತುಕತೆ ನಡೆಸುವುದು ಅತ್ಯಂತ ಅವಶ್ಯವಾಗಿದೆ. ಕುಡಿಯುವ ನೀರು ಹಾಗೂ ಕಾವೇರಿ ನೀರಿನ ದೀರ್ಘಕಾಲಿಕ ನಿರ್ವಹಣೆಗೆ ಮೇಕೆದಾಟುವಿನಂತಹ ಹೊಸ ಯೋಜನೆಯ ರೂಪುರೇಷೆಗಳನ್ನು, ಅದರಿಂದಾಗುವ ಅನುಕೂಲಗಳ ಬಗ್ಗೆ ಉಭಯ ರಾಜ್ಯಗಳ ಜನರಿಗೆ ಮನವರಿಕೆ ಮಾಡಿಸಿ ಮೇಕೆದಾಟು ಯೋಜನೆಗೆ ಶೀಘ್ರ ಚಾಲನೆ ನೀಡಬೇಕಿದೆ.

ನದಿಗಳು ಎಂದಿಗೂ ಭಾಷೆ ಅಥವಾ ರಾಜಕೀಯ ಗಡಿಗಳನ್ನು ಮೀರಿ ಮಾನವೀಯತೆಯನ್ನು ಬೆಸೆಯಬೇಕಿದೆ. ಈ ನಿಟ್ಟಿನಲ್ಲಿ ಉಭಯ ರಾಜ್ಯಗಳ ರಾಜಕೀಯ ನಾಯಕರು ಹಾಗೂ ನೀರಾವರಿ ತಜ್ಞರು ಸೌಹಾರ್ದಯುತವಾಗಿ ಸಭೆ ಸೇರಿ, ಸಮಾಲೋಚಿಸಿ ಯಾವುದೇ ಸಂಘರ್ಷಕ್ಕೆ ಎಡೆ ಮಾಡಿಕೊಡದೆ ಕಾವೇರಿ ನೀರಿನ ಸಮಸ್ಯೆಗೆ ಮಾತುಕತೆಯ ಮೂಲಕವೇ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಅವಶ್ಯವಾಗಿದೆ.

– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ 

 

 

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

16 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

17 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

17 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

18 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

22 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

22 hours ago