ಇಂದಿನ ಡಿಜಿಟಲ್ ಯುಗದಲ್ಲಿ ಆನ್ಲೈನ್ ವಹಿವಾಟು ಜನಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಡಿಜಿಟಲ್ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಸೈಬರ್ ವಂಚನೆಗಳೂ ಹೆಚ್ಚುತ್ತಿವೆ.
ಸಾಮಾನ್ಯ ಜನರು ತಮ್ಮ ಸಂಪಾದನೆಯ ಹಣವನ್ನು ಕ್ಷಣಾರ್ಧದಲ್ಲಿ ಕಳೆದುಕೊಳ್ಳುತ್ತಿzರೆ. ಇಂತಹ ಸಂದರ್ಭದಲ್ಲಿ ಡಿಜಿಟಲ್ ವಂಚನೆಗೆ ಸಂಬಂಧಿಸಿದಂತೆ ಬ್ಯಾಂಕ್ಗಳ ಹೊಣೆಗಾರಿಕೆಯನ್ನು ಒತ್ತಿಹೇಳಿರುವ ಸುಪ್ರೀಂ ಕೋರ್ಟ್ ನಿಲುವು ಸ್ವಾಗತಾರ್ಹವಾಗಿದೆ.
ಬ್ಯಾಂಕ್ಗಳು ಗ್ರಾಹಕರ ಹಣದ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅನುಮಾನಾಸ್ಪದ ವಹಿವಾಟುಗಳನ್ನು ತಕ್ಷಣ ಪತ್ತೆಹಚ್ಚುವ ವ್ಯವಸ್ಥೆಮ ರೂಪಿಸಬೇಕು. ವಂಚನೆ ಸಂಭವಿಸಿದಾಗ ಸಂತ್ರಸ್ತರಿಗೆ ನೆರವು ನೀಡುವಲ್ಲಿ ವಿಳಂಬ ಮಾಡಬಾರದು. ಡಿಜಿಟಲ್ ವಂಚನೆಗೆ ಒಳಗಾದ ಗ್ರಾಹಕರ ಮೇಲೆಯೇ ಸಂಪೂರ್ಣ ಹೊಣೆ ಹೊರಿಸುವುದು ನ್ಯಾಯಸಮ್ಮತವಲ್ಲ. ಬ್ಯಾಂಕ್ಗಳ ಭದ್ರತಾ ಲೋಪ ಅಥವಾ ನಿರ್ಲಕ್ಷ್ಯವಿದ್ದರೆ ಅವುಗಳೂ ಹೊಣೆ ಹೊರಬೇಕು. ಜೊತೆಗೆ ಗ್ರಾಹಕರಲ್ಲಿ ಡಿಜಿಟಲ್ ಸಾಕ್ಷರತೆ ಹೆಚ್ಚಿಸುವ ಕೆಲಸವೂ ನಡೆಯಬೇಕು ಎಂದು ಹೇಳಿದೆ. ಸುಪ್ರೀಂ ಕೋರ್ಟ್ನ ಈ ನಿಲುವು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಗ್ರಾಹಕರ ವಿಶ್ವಾಸವನ್ನು ಬಲಪಡಿಸುವಂತಾಗಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ


