Andolana originals

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಸಾರ್ವಜನಿಕ ಸಾರಿಗೆಯನ್ನು ನೆಚ್ಚಿಕೊಂಡಿದ್ದಾರೆ. ಸುರಕ್ಷಿತ ಲಗೇಜ್ ಸಂಗ್ರಹಣೆ ಕೊರತೆಯಿಂದಾಗಿ ಪ್ರಯಾಣಿಕರು ತೀವ್ರ ಕಿರಿಕಿರಿ ಅನುಭವಿಸುತ್ತಿದ್ದು ,ಈ ಹೊಸ ತಂತ್ರeನ ಆಧಾರಿತ ವ್ಯವಸ್ಥೆ ಅದಕ್ಕೊಂದು ಉತ್ತಮ ಪರಿಹಾರವಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ವ್ಯಾಪ್ತಿಯ ಎಲ್ಲ ಜಿ ಮತ್ತು ಪ್ರಮುಖ ತಾಲ್ಲೂಕು ಬಸ್ ನಿಲ್ದಾಣಗಳಲ್ಲಿಯೂ ಇಂತಹ ಆಧುನಿಕ ಡಿಜಿಟಲ್ ಲಾಕರ್ ಸೌಲಭ್ಯವನ್ನು ತುರ್ತಾಗಿ ಜರಿಗೆ ತರಬೇಕು.

ಸ್ವಯಂಚಾಲಿತ ಪಿನ್ ಹಾಗೂ ಒಟಿಪಿ ಆಧಾರಿತ ಈ ಸುರಕ್ಷಿತ ವ್ಯವಸ್ಥೆಯು ಸಾರ್ವಜನಿಕರಿಗೆ ನೆಮ್ಮದಿಯ ಪ್ರಯಾಣ ಒದಗಿಸುವುದಲ್ಲದೆ, ನಿಗಮಕ್ಕೆ ಹೆಚ್ಚುವರಿ ಟಿಕೆಟೇತರ ಆದಾಯವನ್ನೂ ತರಲಿದೆ. ಪ್ರವಾಸೋದ್ಯಮ ಮತ್ತು ಸ್ಥಳೀಯ ವ್ಯಾಪಾರ ವಹಿವಾಟುಗಳ ಬೆಳವಣಿಗೆಗೂ ಇದು ಪೂರಕವಾಗಲಿದೆ. ಈ ನವೀನ ಮಾದರಿಯು ರಾಜ್ಯದ ಎಲ್ಲೆಡೆ ಶೀಘ್ರವಾಗಿ ವಿಸ್ತರಣೆಯಾಗಲಿ.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

2 mins ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

7 mins ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

23 mins ago

ಸಕ್ಕರೆ ನಾಡಿನಲ್ಲಿ ಬರದಿಂದ ಕಂಗಾಲಾದ ರೈತರು

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…

29 mins ago

ದಸರಾ ಆಹಾರ ಮೇಳ: 100 ಮಳಿಗೆಗೆ 587 ಅರ್ಜಿ!

ಕೇಶವ ಎಂ. ರಾಜ್ಯದ ೩೦ ಜಿಲ್ಲೆಗಳಿಂದಲೂ ಅರ್ಜಿ ಸಲ್ಲಿಕೆ; ಲಾಟರಿ ಎತ್ತುವ ಪ್ರಕ್ರಿಯೆಯಲ್ಲೂ ಪಾರದರ್ಶಕತೆ ಇಲ್ಲ; ಉದ್ಯಮಿಗಳ ಆಕ್ಷೇಪ ಮೈಸೂರು:…

47 mins ago

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

20 hours ago