ಓದುಗರ ಪತ್ರ
ಇತ್ತೀಚೆಗೆ ರಿಷಭ್ ಶೆಟ್ಟಿ ನಿರ್ದೇಶಿಸಿ, ಅಭಿನಯಿಸಿರುವ ಕಾಂತಾರ ಚಾಪ್ಟರ್ ೧ ಚಲನಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಆದರೆ ಕೆಲವು ಅಭಿಮಾನಿಗಳು ಸಿನಿಮಾದಲ್ಲಿ ಬರುವ ದೈವದ ವೇಷಭೂಷಣ ಧರಿಸಿಕೊಂಡು ಬಂದು ಚಿತ್ರ ಮಂದಿರದ ಒಳಗೆ ಓಡಾಡುವುದು, ಕಿರುಚಾಡುವುದು ಹಾಗೂ ಮೈಮೇಲೆ ದೈವ ಬಂದಂತೆ ವರ್ತಿಸುತ್ತಿರುವುದರಿಂದ ಪ್ರೇಕ್ಷಕರು ತೊಂದರೆ ಅನುಭವಿಸುವಂತಾಗಿದೆ.
ಪ್ರತಿಯೊಬ್ಬರಿಗೂ ತಮಗೆ ಇಷ್ಟವಾದ ದೈವಗಳ ಬಗ್ಗೆ ಅಪಾರವಾದ ನಂಬಿಕೆ, ಪ್ರೀತಿ, ಕಾಳಜಿ ಇರುತ್ತದೆ. ಆದರೆ ಸಿನಿಮಾವನ್ನು ಸಿನಿಮಾವಾಗಿ ನೋಡಿ ಆನಂದಿಸಬೇಕೇ ಹೊರತು, ವಿನಾಕಾರಣ ದೈವ ಬಂದಂತೆ ವರ್ತಿಸಿ ಸಿನಿಮಾ ನೋಡುಗರಿಗೂ ತೊಂದರೆ ಕೊಡುವುದು ಸರಿಯಾದ ಕ್ರಮವಲ್ಲ. ಆದ್ದರಿಂದ ಚಿತ್ರಮಂದಿರಗಳಲ್ಲಿ ಶಿಸ್ತು ಬದ್ಧತೆಯಿಂದ ಸಿನಿಮಾ ನೋಡಿ ಕಣ್ತುಂಬಿಕೊಳ್ಳಬೇಕು. ಸಿನಿ ಪ್ರೇಕ್ಷಕರಿಗೆ ತೊಂದರೆ ಉಂಟಾಗುವಂತೆ ವರ್ತಿಸುವವರನ್ನು ಚಿತ್ರಮಂದಿರದಿಂದ ಹೊರಕ್ಕೆ ಕಳುಹಿಸಿ ಇವರಿಂದ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…