ಓದುಗರ ಪತ್ರ
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ ಪ್ರಯೋಗ ಅತ್ಯಂತ ಕೆಟ್ಟ ರೀತಿಯಲ್ಲಿದ್ದು, ಇಡೀ ಸಂಸದೀಯ ವ್ಯವಸ್ಥೆಗೆ ಅಪಚಾರವಾಗಿತ್ತು. ಓರ್ವ ಹಿರಿಯ ಸದಸ್ಯರು ಬಳಸಿದ ಭಾಷೆ ಅಸಂಸದೀಯವಾಗಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸನ ಸಭೆಗಳಿಗೆ ಅತ್ಯಂತ ಮಹತ್ವದ ಸ್ಥಾನ ನೀಡಲಾಗಿದೆ. ರಾಜ್ಯದ ಜನರ ಕಲ್ಯಾಣಕ್ಕೆ ಪೂರಕವಾದ ಶಾಸನಗಳನ್ನು ರಚಿಸುವ ಮಹತ್ವದ ಜವಾಬ್ದಾರಿ ಕೂಡ ಅವರ ಮೇಲಿದೆ. ಸಭಾ ಕಲಾಪಗಳನ್ನು ದೂರದರ್ಶನ ಸೇರಿದಂತೆ ವಿವಿಧ ದೃಶ್ಯ ಮಾಧ್ಯಮಗಳು ನೇರ ಪ್ರಸಾರ ಮಾಡುತ್ತವೆ. ಪ್ರಮುಖ ಜವಾಬ್ದಾರಿಯನ್ನು ಹೊತ್ತಿರುವ ಜನಪ್ರತಿನಿಧಿಗಳ ನಡವಳಿಕೆಯನ್ನು ಇಡೀ ರಾಜ್ಯದ ಜನರು ಗಮನಿಸುತ್ತಿದ್ದಾರೆ.
ಉಭಯ ಸದನಗಳ ಸದಸ್ಯರು ತಮ್ಮ ಘನತೆಗೆ ತಕ್ಕಂತೆ ಮಾತನಾಡಬೇಕೆ ಹೊರತು, ಬಾಯಿ ಚಪಲಕ್ಕಾಗಲಿ ಅಥವಾ ಪಕ್ಷದ ನಾಯಕರನ್ನು ಓಲೈಸುವುದಕ್ಕಾಗಿ ಆಡುವ ಇಂತಹ ಕೆಳಮಟ್ಟದ, ಸಭ್ಯತೆಯ ಎಲ್ಲೆಯನ್ನು ಮೀರುವ ಮಾತುಗಳು ತೀರಾ ಖಂಡನಾರ್ಹವಾಗಿವೆ. ಅನೇಕ ವೇಳೆ ಸಭಾಧ್ಯಕ್ಷರೇ ಮೂಕ ಪ್ರೇಕ್ಷಕರಾಗಿ ಇರಬೇಕಾದ ಸನ್ನಿವೇಶ ಎದುರಾಗಿದೆ. ಇನ್ನು ಮುಂದಾದರೂ ಜನಪ್ರತಿನಿಧಿಗಳು ಶಾಸನ ಸಭೆಯಲ್ಲಿ ತಮ್ಮ ಘನತೆಗೆ ತಕ್ಕಂತೆ ಮಾತನಾಡುವ ಮೂಲಕ ಶಾಸನಸಭೆಯ ಗೌರವವನ್ನು ಕಾಪಾಡುವುದು ಅಗತ್ಯ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…