ಸತತ 9 ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ದ ಅರ್ಜುನ ಆನೆ ಕಳೆದ ವರ್ಷ ಸಕಲೇಶಪುರ ಸಮೀಪ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಸಾವನ್ನಪ್ಪಿತ್ತು.
2019ರಲ್ಲಿ ದಸರಾದಿಂದ ನಿವೃತ್ತಿ ಪಡೆದಿದ್ದ ಅರ್ಜುನ ಕಳೆದ ವರ್ಷದ ದಸರಾದಲ್ಲಿ ನಿಶಾನೆ ಆನೆಯಾಗಿ ಗಜಪಡೆಯನ್ನು ಮುನ್ನಡೆಸಿದ್ದ. ಈ ವರ್ಷವೂ ನಿಶಾನೆ ಆನೆಯಾಗಿ ಭಾಗಿಯಾಗುವ ನಿರೀಕ್ಷೆ ಇತ್ತು.
ಸರ್ಕಾರ ಸಕಲೇಶಪುರದ ಅರಣ್ಯ ಪ್ರದೇಶದಲ್ಲಿ ಅರ್ಜುನ ಆನೆಯ ಅಂತ್ಯಕ್ರಿಯೆಯನ್ನು ಮಾಡಿದ್ದು, ಸಮಾಧಿ ಸ್ಥಳದಲ್ಲಿ ಹಾಗೂ ಅರ್ಜುನನ ವಾಸಸ್ಥಳವಾಗಿದ್ದ ಎಚ್.ಡಿ.ಕೋಟೆಯ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಿಸುವುದಾಗಿ ತಿಳಿಸಿತ್ತು.
ಆದರೆ ಈವರೆಗೂ ಸ್ಮಾರಕ ನಿರ್ಮಾಣದ ಕಾಮಗಾರಿಯೇ ಪ್ರಾರಂಭವಾಗಿಲ್ಲ. ಅರ್ಜುನ ದಸರಾದಲ್ಲಿ ಅಂಬಾರಿ ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ. ಇಂತಹ ಆನೆಗೆ ಗೌರವ ಸೂಚಿಸಬೇಕಾದದ್ದು ಸರ್ಕಾರದ ಕರ್ತವ್ಯ. ಆದ್ದರಿಂದ ಈ ಬಾರಿಯ ದಸರಾ ಮಹೋತ್ಸವದಲ್ಲಿ ಅರ್ಜುನ ಆನೆಯ ಸ್ತಬ್ಧಚಿತ್ರ ಪ್ರದರ್ಶಿಸುವ ಮೂಲಕ ಆತನನ್ನು ಸ್ಮರಿಸಬೇಕು.
– ಅಖಿಲೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.
ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…