Andolana originals

ಓದುಗರ ಪತ್ರ: ಗ್ರಾಮೀಣ ಜನರಿಗೂ ದಸರಾ ಪಾಸ್ ವಿತರಿಸಿ

ನವರಾತ್ರಿ ಉತ್ಸವದ ಅಂಗವಾಗಿ ಮೈಸೂರಿನ ನಾನಾ ಭಾಗಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಈ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ಜಿಲ್ಲಾಡಳಿತದ ವತಿಯಿಂದ ಸಾರ್ವಜನಿಕರಿಗೆ ಪಾಸ್‌ಗಳನ್ನು ವಿತರಿಸಲಾಗುತ್ತಿದೆ. ಆದರೆ ಈ ಪಾಸ್‌ಗಳ ಪೈಕಿ ಬಹುತೇಕ ಪಾಸ್‌ಗಳನ್ನು ನಗರ ಭಾಗದವರೇ ಪಡೆದುಕೊಳ್ಳುತ್ತಿದ್ದು, ಗ್ರಾಮೀಣ ಭಾಗದವರಿಗೆ ಈ ಪಾಸ್‌ಗಳು ಎಲ್ಲಿ ಸಿಗುತ್ತವೆ? ಹೇಗೆ ಖರೀದಿಸಬೇಕು? ಎಂಬುದೇ ತಿಳಿಯುತ್ತಿಲ್ಲ. ಸರ್ಕಾರ ಪ್ರತಿ ಬಾರಿಯೂ ಇದು ಜನಸಾಮಾನ್ಯರ ದಸರಾವಾಗಬೇಕು ಎಂದು ಹೇಳಿಕೆಗಳನ್ನು ನೀಡುತ್ತಿದೆಯೇ ವಿನಾ ಈವರೆಗೂ ಜನಸಾಮಾನ್ಯರ ದಸರಾ ಆಗಿಲ್ಲ. ಯುವ ದಸರಾ, ಯುವ ಸಂಭ್ರಮ, ಜಂಬೂ ಸವಾರಿ, ಪಂಜಿನ ಕವಾಯತಿನಂತಹ ಪ್ರಮುಖ ಕಾರ್ಯಕ್ರಮಗಳ ಹೆಚ್ಚಿನ ಪಾಲು ಪಾಸ್‌ಗಳು ಜನಪ್ರತಿನಿಧಿಗಳ ಕೈ ಸೇರುತ್ತಿವೆ. ಇದರಿಂದಾಗಿ ದಸರಾ ಕಣ್ತುಂಬಿಕೊಳ್ಳಬೇಕು ಎಂದು ಬರುವ ಗ್ರಾಮೀಣ ಭಾಗದ ಜನರು ಪಾಸ್ ಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳನ್ನು ದೂರದಿಂದ ನಿಂತು ನೋಡಿ ಹೋಗುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಈ ಬಾರಿಯಾದರೂ ಜಿಲ್ಲಾಡಳಿತ ತಾಲ್ಲೂಕು ಮಟ್ಟದಲ್ಲಿಯೂ ದಸರಾ ಕಾರ್ಯಕ್ರಮಗಳ ಪಾಸ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು.
-ವಿನೋದ್ ಕುಮಾರ್, ಕೊಡಸೀಗೆ, ಎಚ್.ಡಿ.ಕೋಟೆ ತಾ

 

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

11 hours ago