ಓದುಗರ ಪತ್ರ
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ ಸೀರೆ ಹಾಗೂ ವರ್ಷಾಂತ್ಯದೊಳಗೆ ಎರಡು ಕಾಟನ್ ಸೀರೆಗಳನ್ನು ನೀಡಲಾಗುತ್ತಿದ್ದು ಪುರುಷರಿಗೆ ಪ್ಯಾಂಟ್, ಶರ್ಟ್ ಹಾಗೂ ಹತ್ತು ಹಲವಾರು ರೀತಿಯ ಸುರಕ್ಷತಾ ಪರಿಕರಗಳನ್ನು ಕೊಡಲಾಗುವುದು ಎಂದು ನಗರಪಾಲಿಕೆ ಆಡಳಿತಾಧಿಕಾರಿ ನಿತೇಶ್ ಪಾಟೀಲ್ ಅವರು ಹೇಳಿರುವುದು ಶ್ಲಾಘನೀಯ. ಈ ಬಾರಿಯ ದಸರಾ ಮಹೋತ್ಸವಕ್ಕೂ ಮುನ್ನ ಪಾದಚಾರಿಗಳಿಗೆ ತೊಂದರೆಯಾಗದಂತೆ, ಶೇ.೩೦ರಷ್ಟು ಸ್ಥಳ ವ್ಯಾಪಾರಸ್ಥರಿಗೆ ಹಾಗೂ ಶೇ.೭೦ರಷ್ಟು ಪಾದಚಾರಿಗಳಿಗೆ ಮುಕ್ತವಾಗಿರಬೇಕು ಎಂದು ಮಹಾನಗರ ಪಾಲಿಕೆಯ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಎಲ್ಲೆಂದರಲ್ಲಿ ಕಸ ಹಾಕುವವರಿಗೆ ದಂಡಾಸ್ತ್ರ ಪ್ರಯೋಗಿಸಿ ಎಂದು ಹೇಳಿರುವುದು ಒಳ್ಳೆಯ ಬೆಳವಣಿಗೆ. ಇದು ನಿರಂತರ ಪ್ರಕ್ರಿಯೆಯಾಗಬೇಕು.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…