ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು ತಮ್ಮ ನಿರ್ಧಾರ ಪ್ರಕಟಿಸಿರುವುದು ಕೂಡ ಗಮನಾರ್ಹವಾಗಿದೆ.
ನಮ್ಮಲ್ಲಿ ಏನೇ ಭಿನ್ನಾಭಿಪ್ರಾಯ ಇರಲಿ, ಅದನ್ನು ಒಂದೆಡೆ ಕುಳಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ದೇಶದ ಗೌರವವನ್ನು ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು



