ಇತ್ತೀಚೆಗೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರುಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್ ಆರಾಧೆ ಅವರು ಲೈಂಗಿಕ ಶಿಕ್ಷಣವನ್ನು ಮಕ್ಕಳಿಗೆ ಪ್ರಾಥಮಿಕ ಶಾಲಾ ಹಂತದಲ್ಲೇ ಹೇಳಿಕೊಡುವಂತಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಾಮಾನ್ಯವಾಗಿ ಮಕ್ಕಳಿಗೆ ಕಲಿಕಾ ಹಂತ ಇರುವುದೇ ಪ್ರಾಥಮಿಕ ಶಾಲಾ ಹಂತದಲ್ಲಿ. ಅಲ್ಲಿಂದಲೇ ಲೈಂಗಿಕ ಶಿಕ್ಷಣದ ಬಗ್ಗೆ ಹೇಳಿಕೊಟ್ಟರೆ ಮಕ್ಕಳು ಕುತೂಹಲಕ್ಕಾಗಿ ಅಡ್ಡ ದಾರಿ ಹಿಡಿದರೆ ಅದಕ್ಕೆ ಯಾರು ಹೊಣೆ? ಕೆಲವು ಮಕ್ಕಳು ಪಾಠ ಪ್ರವಚನಗಳಿಗಿಂತ ಲೈಂಗಿಕ ಶಿಕ್ಷಣದ ಬಗ್ಗೆಯೇ ಹೆಚ್ಚು ಆಕರ್ಷಿತವಾಗಿ, ಓದಿನಲ್ಲಿ ಹಿಂದೆ ಬೀಳುವ ಸಾಧ್ಯತೆಯಿರುತ್ತದೆ. ಈ ಬಗ್ಗೆ ಶಿಕ್ಷಣ ತಜ್ಞರು ಮತ್ತು ಮನೋವಿಜ್ಞಾನಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು





