Andolana originals

ಓದುಗರ ಪತ್ರ: ಚಾಮುಂಡಿ ಬೆಟ್ಟ ದೇಗುಲದ ಗೋಪುರಕ್ಕೆ ಧಕ್ಕೆ ತರಬೇಡಿ

ವಿಶ್ವ ವಿಖ್ಯಾತಿ ಹೊಂದಿರುವ ಮೈಸೂರಿನ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನಕ್ಕೆ ರಾಜ್ಯ, ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ವಿದೇಶಿಗರೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಅಲ್ಲದೆ ಐತಿಹಾಸಿಕ ಹಿನ್ನೆಲೆ ಹೊಂದಿರುವ ಕಾರಣದಿಂದ ಸರ್ಕಾರಿ ಮತ್ತು ಇತರೇ ರಜಾ ದಿನಗಳಲ್ಲಿಯೂ ಕುಟುಂಬ ಸಮೇತರಾಗಿ ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಇದೊಂದು ಪಾರಂಪರಿಕ ಸ್ಥಳವೂ ಆಗಿದೆ. ಆದರೆ ಕೆಲವು ದಿನಗಳ ಹಿಂದೆ  ದೇವಾಲಯದ ಸನಿಹವೇ ನೂತನವಾಗಿ ಒಂದು ಕಟ್ಟಡ ಕಾಮಗಾರಿ ನಡೆಯುತ್ತಿರುವುದರಿಂದ, ಸಾಕಷ್ಟು ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ನಿರ್ಮಾಣ ಮಾಡುತ್ತಿರುವ ಕಟ್ಟಡದಿಂದ ದೇವಾಲಯದ ಪಾರಂಪರಿಕ ಗೋಪುರವೇ ಕಾಣದಂತೆ ಮರೆ ಮಾಡಲಾಗುತ್ತಿದೆಯೇ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ನೂತನ ಕಟ್ಟಡ ಕಾಮಗಾರಿಯಿಂದ ದೇವಾಲಯದ ಐತಿಹಾಸಿಕ ಗೋಪುರದ ಅಸ್ತಿತ್ವಕ್ಕೆ ತೊಂದರೆ ಯಾಗಲಿದೆಯೆ? ಎಂಬ ಬಗ್ಗೆ ಸಂಬಂಧಪಟ್ಟವರು ಜನರಿಗೆ ಸ್ಪಷ್ಟನೆ ನೀಡಬೇಕಿದೆ. ಒಂದು ವೇಳೆ ಗೋಪುರಕ್ಕೆ ತೊಂದರೆಯಾಗುವುದಾದರೆ ಇದರ ಬಗ್ಗೆ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕಿದೆ.

– ಬಿ.ಎಸ್.ಸಾಯಿ ಸಂದೇಶ್, ಮೈಸೂರು

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

7 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

7 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

7 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

7 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

8 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

8 hours ago