ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತರು ವಾಹನ ಚಾಲನೆ ಮಾಡುವುದು, ವ್ಹೀಲಿಂಗ್ ಮಾಡುವುದು ಹಾಗೂ ದ್ವಿಚಕ್ರ ವಾಹನದಲ್ಲಿ ಮೂರು ಜನರು ತೆರಳುವುದು (ತ್ರಿಬಲ್ ರೈಡಿಂಗ್) ಹೆಚ್ಚಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿ ಜೀವ ಹಾನಿಯಾಗಿರುವ ಪ್ರಕರಣಗಳೂ ನಡೆದಿವೆ.
ಅಪ್ರಾಪ್ತರು ವಾಹನ ಚಾಲನೆ ಮಾಡಿದ್ದು ಕಂಡು ಬಂದರೆ ವಾಹನ ಮಾಲೀಕರಿಗೆ ಪೊಲೀಸರು ೨೫ ಸಾವಿರ ರೂ. ದಂಡ ವಿಧಿಸುತ್ತಿದ್ದರೂ ಪೋಷಕರು ತಮ್ಮ ಮಕ್ಕಳ ಕೈಗೆ ವಾಹನ ನೀಡುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಪೋಷಕರು ತಮ್ಮ ಮಕ್ಕಳು ಚಾಲನಾ ಪರವಾನಗಿ ಪಡೆದ ನಂತರವೇ ಅವರ ಕೈಗೆ ವಾಹನ ನೀಡಬೇಕು. ೧೮ಕ್ಕಿಂತ ಕಡಿಮೆ ವಯಸ್ಸಿನವರು ವಾಹನ ಚಾಲನೆ ಮಾಡಬಾರದು ಹಾಗೂ ಸಂಚಾರ ನಿಯಮಗಳನ್ನು ಪಾಲನೆ ಮಾಡುವ ಬಗ್ಗೆ ಪೊಲೀಸ್ ಇಲಾಖೆಯಿಂದ ಶಾಲಾ -ಕಾಲೇಜುಗಳಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು





