ಮಾರ್ಚ್ ೬ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ.
ಈ ಬಾರಿಯ ಆಯವ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು.
ಕಳೆದ ಮೂರು ವರ್ಷಗಳಿಂದ ಸದರಿ ಕಾಯ್ದೆಯ ಸೆಕ್ಷನ್ ಸಿ ಅಡಿಯಲ್ಲಿ ಸಾವಿರಾರು ಕೋಟಿ ರೂ. ಪರಿಶಿಷ್ಟರ ಮೀಸಲು ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ಈ ಬಾರಿ ಬಜೆಟ್‌ನಲ್ಲಿ ಪರಿಶಿಷ್ಟರಿಗೆ ಮೀಸಲಾದ ಹಣವನ್ನು ಆ ಸಮುದಾಯದ ಅಭಿವೃದ್ಧಿಗೆ ಮೀಸಲಿಡುವುದು ಅಗತ್ಯವಾಗಿದೆ.
– ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.





