Andolana originals

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ ವರ್ಷಗಳಲ್ಲಿ ಎಲ್ಲ ಜಿಗಳಲ್ಲಿ ದಸರಾ ಆಚರಣೆ ಮಾಡುತ್ತಿದ್ದರೂ (ದಸರಾ ಎಂದರೆ ಮೈಸೂರು,ಮೈಸೂರು ಎಂದರೆ ದಸರಾ) ತನ್ನ ವೈಭವನ್ನು ಉಳಿಸಿಕೊಂಡು ದೇಶ, ವಿದೇಶಗಳಿಂದ ಜನರನ್ನು ಆಕರ್ಷಿಸುತ್ತಿರುವುದು ಮೈಸೂರು ದಸರಾದ ವಿಶೇಷತೆ.

ಕಂಬಳ ದಕ್ಷಿಣ ಕನ್ನಡದ ಜನತೆಯ ಮನಸ್ಸಿನಲ್ಲಿ ಹಾಸು ಹೊಕ್ಕಾಗಿರುವ ಜನಪ್ರಿಯ (ಕಂಬಳ ಎಂದರೆ ದಕ್ಷಿಣ ಕನ್ನಡ, ದಕ್ಷಿಣ ಕನ್ನಡ ಎಂದರೆ ಕಂಬಳ) ಜನಪದ ಕ್ರೀಡೆಯಾಗಿ ಸುಮಾರು ೮೦೦ ವರ್ಷಗಳಿಂದ ಸಾಂಪ್ರದಾಯಿಕವಾಗಿ ಆಚರಿಸುತ್ತಾ ಬಂದು ವಿಶೇಷ ಮನ್ನಣೆಯನ್ನು ಪಡೆದಿದೆ. ಆದರೆ ಮೈಸೂರಿನಲ್ಲಿ ಸಮೃದ್ಧವಾಗಿ ಬೆಳೆದು ನಿಂತಿರುವ ಮರಗಳನ್ನು ಕಡಿದು ಕಂಬಳ ಕ್ರೀಡೆಯನ್ನು ಮಾಡುವುದು ಎಷ್ಟು ಸರಿ ಎಂಬುದು ಸಾರ್ವಜನಿಕರ ಪ್ರಶ್ನೆ.

ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆ ನಡೆಸುವುದಕ್ಕೆ ಪರಿಸರವಾದಿಗಳು, ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಜನಸಾಮಾನ್ಯರು, ಕಂಬಳ ಕ್ರೀಡೆ ಆಚರಿಸುವುದರಿಂದ ಹಿಂದೆ ಸರಿದು,ಕಂಬಳ ಕ್ರೀಡೆಯ ಸ್ತಬ್ಧಚಿತ್ರ ಮಾಡಿ, ಗೌರವ ಸಲ್ಲಿಸುವುದರ ಮೂಲಕ ಸರಳ ದಸರಾ (ಮಳೆ ಇಲ್ಲದ ಕಾರಣ) ಆಚರಣೆ ಮಾಡಬೇಕೆಂದು ಆಗ್ರಹಿಸಿರುವುದು ಸಮ್ಮತವಾದದ್ದು.

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

 

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

9 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

10 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

10 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

10 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

10 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

15 hours ago