Andolana originals

ಓದುಗರ ಪತ್ರ: ಕಾನ್ಫಿಡೆಂಟ್ ಮಾಲೀಕನಿಗೆ ಬದುಕುವ ಕಾನ್ಫಿಡೆಂಟ್ ಇಲ್ಲದಾಯಿತೇ?

ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ ಸಂತೋಷ ಹಾಗೂ ನೆಮ್ಮದಿಯನ್ನು ಹಣದಿಂದ ಕೊಳ್ಳಲು ಸಾಧ್ಯವಿಲ್ಲ. ಹಣ ಅತಿಯಾದಾಗ ಅದರ ಸರಿಯಾದ ನಿರ್ವಹಣೆ ಇಲ್ಲದಿದ್ದರೆ ಅದು ಕೆಲಸ, ನೆಮ್ಮದಿ ಹಾಗೂ ಪ್ರಾಣವನ್ನೂ ಕಸಿದುಕೊಳ್ಳಬಹುದು ಎಂಬುದಕ್ಕೆ ಸಿ.ಜೆ.ರಾಯ್ ಅವರ ಆತ್ಮಹತ್ಯೆಯೇ ಉದಾಹರಣೆಯಾಗಿದೆ. ಹಣವನ್ನು ಸಂಪಾದಿಸುವುದಷ್ಟೇ ಅಲ್ಲ, ಅದನ್ನು ಆನಂದಿಸುವ ಹಕ್ಕೂ ನನ್ನದು ಎಂಬ ಸಂದೇಶವನ್ನು ರಾಯ್ ಸ್ಪಷ್ಟವಾಗಿ ನೀಡುತ್ತಿದ್ದರು. ಮುಖ್ಯವಾಗಿ ಯುವಕರಿಗೆ ಸ್ಛೂರ್ತಿದಾಯಕ ವ್ಯಕ್ತಿಯಾಗಿದ್ದರು. ಸಾಮಾನ್ಯ ಹಿನ್ನೆಲೆಯಿಂದ ಬಂದವನೂ ದೊಡ್ಡ ಮಟ್ಟದಲ್ಲಿ ಗೆಲ್ಲಬಹುದು ಎಂಬ ಭರವಸೆಯನ್ನು ಮೂಡಿಸಿದ್ದರು. ನಿರಂತರ ವಿಚಾರಣೆ ಮತ್ತು ಒತ್ತಡವೇ ಈ ದುರ್ಘಟನೆಗೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದರೂ, ಉದ್ಯಮಿಗಳಿಗೆ ಐಟಿಯ ಒತ್ತಡ ಹಾಗೂ ತಲೆಬಿಸಿ ಹೊಸದೇನು ಅಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಒಂದು ಶಾಲೆಯ ಮುಂಭಾಗ ಕುಳಿತು ಜಗತ್ತನ್ನು ಗೆಲ್ಲುವ ಕನಸು ಕಂಡ ಆ ಬಾಲಕ, ಇಂದು ಆ ಕನಸುಗಳ ಭಾರವನ್ನೇ ಹೊತ್ತುಕೊಂಡು ಜಗತ್ತಿಗೆ ವಿದಾಯ ಹೇಳಿರುವುದು ವಿಪರ್ಯಾಸ. ಕಾನ್ಛಿಡೆಂಟ್ ಹೆಸರಿನ ದೊಡ್ಡ ಗ್ರೂಪ್ ಅನ್ನು ಹುಟ್ಟು ಹಾಕಿದ್ದ ವ್ಯಕ್ತಿಯ ಜೀವನದಲ್ಲಿ ಬದುಕುವ ಕಾನ್ಛಿಡೆಂಟ್ ಇಲ್ಲದಂತಾಗಿದ್ದು ದುರಂತವೇ ಸರಿ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

 

ಆಂದೋಲನ ಡೆಸ್ಕ್

Recent Posts

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

13 mins ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

2 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

5 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

6 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

6 hours ago