Andolana originals

ಓದುಗರ ಪತ್ರ: ಹಿಂದಿ ಭಾಷೆ ಬಗ್ಗೆ ತಾತ್ಸಾರ ಸಲ್ಲದು

ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್ ನೀಡಲಾಗುವುದು ಎಂದು ಹೇಳಿರುವುದು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಬೇಸರ ಮೂಡಿಸಿದೆ.

ವರ್ಷಪೂರ್ತಿ ಕಲಿಸಿದ ಗುರುಗಳ ಹಾಗೂ ವಿದ್ಯಾರ್ಥಿಗಳ ಪಾಡೇನು? ಶಿಕ್ಷಕರ ಶ್ರಮಕ್ಕೆ ಹಾಗೂ ಮಕ್ಕಳ ಕಲಿಕೆಗೆ ಬೆಲೆ ಬೇಡವೇ? ನಮ್ಮ ಕನ್ನಡದ ಮಕ್ಕಳನ್ನು ಬರೀ ಕನ್ನಡಕ್ಕೆ ಏಕೆ ಸೀಮಿತಗೊಳಿಸಲಾಗುತ್ತಿದೆ? ಹಿಂದಿ ಕಲಿತರೆ ರಾಷ್ಟ್ರ ಮಟ್ಟದಲ್ಲಿ ಮಕ್ಕಳು ಪ್ರತಿ ನಿಧಿಸಲು, ಬೆಳೆಯಲು ಒಳಿತಾಗುವುದಿಲ್ಲವೇ ಎಂಬ ಪ್ರಶ್ನೆ ಕಾಡುತ್ತದೆ. ಹಿಂದಿ ನಮ್ಮ ದೇಶದಲ್ಲಿ ಅತಿ ಹೆಚ್ಚು ಜನರು ಮಾತನಾಡುವ ಭಾಷೆಯಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಹಲವಾರು ದಶಕಗಳಿಂದ ಹಿಂದಿಯನ್ನು ತೃತೀಯ ಭಾಷೆಯನ್ನಾಗಿ ಕಲಿಸಲಾಗುತ್ತಿದೆ. ಹೀಗಾಗಿ ನಮ್ಮ ಕನ್ನಡ ಮಕ್ಕಳು ಆ ಭಾಷೆಯನ್ನು ಇಷ್ಟಪಟ್ಟು ಕಲಿಯುವುದರಲ್ಲಿ ತಪ್ಪೇನೂ ಇಲ್ಲ. ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ನಿತ್ಯ ಹಿಂದಿ ಕಲಿಸುತ್ತಿರುವ ರಾಜ್ಯದಲ್ಲಿನ ಸಾವಿರಾರು ಶಿಕ್ಷಕರ ಗತಿಯೇನು? ಈ ಬಗ್ಗೆಯೂ ಸರ್ಕಾರ ಚಿಂತಿಸುವುದು ಒಳಿತು.

 -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

16 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

16 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

23 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

23 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

23 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

23 hours ago