Andolana originals

ಓದುಗರ ಪತ್ರ: ಕುಂಭಮೇಳದ ಬಗ್ಗೆ ಲೇವಡಿ ಸಲ್ಲದು

ಹಿಂದೂ ಧರ್ಮ ಪಾಲನೆ ಮಾಡುವವರು ಧಾರ್ಮಿಕ ಶ್ರದ್ಧೆಯಿಂದ ಸ್ವಯಂಪ್ರೇರಿತರಾಗಿ ಮಹಾಕುಂಭಮೇಳದಲ್ಲಿ ಭಾಗವಹಿಸಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಆದರೆ ಕೆಲ ರಾಜಕಾರಣಿಗಳು ಇದನ್ನು ಟೀಕಿಸುತ್ತಿದ್ದು, ‘ಕುಂಭಮೇಳದಲ್ಲಿ ಸ್ನಾನ ಮಾಡುವುದರಿಂದ ಬಡತನ ನಿರ್ಮೂಲನೆ ಆಗುತ್ತದೆಯೇ?’ ಎಂದು ಲೇವಡಿ ಮಾಡುತ್ತಾ ಕೋಟ್ಯಂತರ ಹಿಂದೂ ಸಮುದಾಯದವರ ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತಿದ್ದಾರೆ.

ಅಖಿಲೇಶ್ ಯಾದವ್ ಅಧಿಕಾರದಲ್ಲಿದ್ದಾಗ ನಡೆದ ಇಂತಹ ಧಾರ್ಮಿಕ ಸಮಾರಂಭಗಳ ಬಗ್ಗೆ ಧ್ವನಿ ಎತ್ತದ ಹಾಗೂ ಇತರೆ ಯಾವುದೇ ಧರ್ಮಗಳ ಆಚರಣೆಗಳ ಬಗ್ಗೆ ಮಾತನಾಡದೆ ಕೇವಲ ಒಂದು ಧರ್ಮದ ಎಲ್ಲ ಧಾರ್ಮಿಕ ಆಚರಣೆಗಳನ್ನು ಲೇವಡಿ ಮಾಡುವುದು ಸೊಗಲಾಡಿತನದ ಪರಮಾವಧಿ ಅಲ್ಲವೇ? ೩೫-೪೦ ಕೋಟಿ ಜನ ಸೇರಿರುವ ಕುಂಭಮೇಳದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಾ, ‘ನನ್ನ ಅಂದಾಜಿನ ಪ್ರಕಾರ ಅಲ್ಲಿನ ಕಾಲ್ತುಳಿತದಲ್ಲಿ ೧೦೦೦ ಮಂದಿ ಸಾವನ್ನಪ್ಪಿದ್ದಾರೆ’ ಎನ್ನುವ ಮಲ್ಲಿಕಾರ್ಜುನ ಖರ್ಗೆರವರ ಹೇಳಿಕೆ ನಿಜಕ್ಕೂ ಖಂಡನೀಯ. ಹಿಂದೂಗಳ ಭಾವನೆಗೆ ಧಕ್ಕೆ ತರುವ ಇಂತಹ ಹೇಳಿಕೆಗಳಿಗೆ ಧಿಕ್ಕಾರವಿರಲಿ. ಇನ್ನಾದರೂ ಕಾಂಗ್ರೆಸ್ ಪಕ್ಷದ ಕೆಲ ನಾಯಕರು ತಮ್ಮ ಸ್ಥಾನಕ್ಕೆ ಘನತೆ ತರುವಂತೆ ನಡೆದುಕೊಳ್ಳಲಿ.

-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು.

ಆಂದೋಲನ ಡೆಸ್ಕ್

Recent Posts

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

13 mins ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

2 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

5 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

6 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

6 hours ago