ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನೂ ಪ್ರಕಟಿಸಲಾಗುತ್ತದೆ. ಈ ಸಮಯದಲ್ಲಿ ಮಕ್ಕಳ ಮನಸ್ಸಿಗೆ ಬೇಸರವಾಗದೆ ಇರುವ ಹಾಗೆ ನೋಡಿಕೊಳ್ಳಬೇಕು. ಯಾವ ಶ್ರೇಣಿಯಲ್ಲಿ ಫಲಿತಾಂಶ ಬಂದರೂ ಅಥವಾ ಅನುತ್ತೀರ್ಣಗೊಂಡರೂ ಪೋಷಕರು ತಮ್ಮ ಮಕ್ಕಳೊಂದಿಗೆ ಬೇರೆ ಮಕ್ಕಳನ್ನು ಹೋಲಿಸಿ ನಿಂದಿಸುವುದು, ಅವರಿಗಾಗಿ ಖರ್ಚು ಮಾಡಿದ ಪಟ್ಟಿಯನ್ನು ಹೇಳಿ ಹಂಗಿಸುವುದನ್ನು ಮಾಡಬಾರದು.
ಪೋಷಕರ ಟೀಕೆಗಳಿಂದ ಮಕ್ಕಳು ಮನೆ ಬಿಟ್ಟು ಹೋಗಬಹುದು ಅಥವಾ ಮನನೊಂದು ಆತ್ಮಹತ್ಯೆಗೂ ಯತ್ನಿಸಬಹುದು. ಎಲ್ಲ ಮಕ್ಕಳ ಬುದ್ಧಿಮಟ್ಟ ಒಂದೇ ತರಹ ಇರುವುದಿಲ್ಲ. ಬದುಕುವುದಕ್ಕೆ ಹಲವಾರು ಮಾರ್ಗಗಳಿವೆ. -ಲಿತಾಂಶ ಏನೇ ಆದರೂ ಮಕ್ಕಳನ್ನು ಪ್ರೋತ್ಸಾಹಿಸಿದರೆ ಮುಂದಿನ ತರಗತಿಯಲ್ಲಿ ಓದುವ ಆಸಕ್ತಿಯನ್ನು ಬೆಳೆಸಿಕೊಳ್ಳುತ್ತಾರೆ. ತಂದೆ ತಾಯಿಯ ಬಗ್ಗೆ ಗೌರವ ಹೆಚ್ಚಾಗುತ್ತದೆ. ತಮ್ಮ ಮಕ್ಕಳನ್ನು ಪ್ರೀತಿಸುವುದರೊಂದಿಗೆ ಅವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದೂ ಪೋಷಕರ ಕರ್ತವ್ಯ
-ಎಂ. ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…