ಕಳೆದ ಭಾನುವಾರ ಭಾರತದ ಕ್ರಿಕೆಟ್ ತಂಡಕ್ಕೆ ಡಬಲ್ ಧಮಾಕಾ. ದೊರೆತಿದೆ. ಭಾರತದ ಪುರುಷರು ಆಸ್ಟ್ರೇಲಿಯಾವನ್ನು ಟಿ-೨೦ ಪಂದ್ಯದಲ್ಲಿ ಸೋಲಿಸಿ ಜಯಭೇರಿ ಬಾರಿಸಿದರೆ, ಮತ್ತೊಂದೆಡೆ ಭಾರತ ಕ್ರಿಕೆಟ್ ಮಹಿಳಾ ತಂಡವು ವಿಶ್ವಕಪ್ ಏಕದಿನ ಪಂದ್ಯದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಗೆಲುವು ಸಾಧಿಸುವ ಮೂಲಕ ಪ್ರಥಮ ಬಾರಿಗೆ ಚಾಂಪಿ ಯನ್ಸ್ ಆಗಿ ಹೊರ ಹೊಮ್ಮಿದ್ದು, ದೇಶಕ್ಕೆ ಕೀರ್ತಿ ತಂದಿದೆ.
ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ವಿಶ್ವಕಪ್ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಈ ಬಾರಿ ಭಾರತ ವಿಶ್ವಕಪ್ ಗೆಲ್ಲುತ್ತದೆ ಎಂದು ನುಡಿದಿದ್ದ ಭವಿಷ್ಯ ಹುಸಿಯಾಗಲಿಲ್ಲ. ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಹಾಗೂ ಅವರ ತಂಡಕ್ಕೆ ಅಭಿನಂದನೆಗಳು.
– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು





