Mysore
23
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಓದುಗರ ಪತ್ರ

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ ಬೆಳಕಾಗಿದ್ದ ಹಾಗೂ ಜನರಿಂದ ಪ್ರೀತಿಯಿಂದ ಬಾಬಾ ಸಾಹೇಬ್ ಎಂದೇ ಕರೆಸಿಕೊಳ್ಳುತ್ತಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದೆ.

ಭಾರತದಲ್ಲಿ ವ್ಯಾಸಂಗಮಾಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಅಂಬೇಡ್ಕರ್ ಅವರು ಕೊಲಂಬಿಯಾ ವಿಶ್ವವಿದ್ಯಾನಿಲಯದಲ್ಲಿ ಉನ್ನತ ವ್ಯಾಸಂಗ ಮಾಡಿ ಜ್ಞಾನದ ಭಂಡಾರವೇ ಆಗಿದ್ದರು.

ರಾಜ ಪ್ರಭುತ್ವದಿಂದ ಪ್ರಜಾಪ್ರಭುತ್ವದೆಡೆಗೆ ದೇಶವನ್ನು ಮುನ್ನಡೆಸಿದ ಬಾಬಾ ಸಾಹೇಬರು ತೆರಿಗೆ ಪಾವತಿದಾರರಿಗೆ ಮಾತ್ರ ಮೀಸಲಾಗಿದ್ದ ಮತದಾನದ ಹಕ್ಕನ್ನು ದೇಶದ ಎಲ್ಲ ಪ್ರಜೆಗಳಿಗೂ ನೀಡಿದರು. ಮಹಿಳೆಯರ ಮೇಲಾಗುತ್ತಿದ್ದ ಶೋಷಣೆಯನ್ನು ತಡೆಯಲು ಸಂವಿಧಾನದಲ್ಲಿ ಕಾನೂನು ರೂಪಿಸಿದರು. ಕಾರ್ಮಿಕ ಕಾಯ್ದೆಗಳ ಮೂಲಕ ಕಾರ್ಮಿಕರ ಶೋಷಣೆಗೆ ಕಡಿವಾಣ ಹಾಕುವ ಮೂಲಕ ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಎಂಬಂತೆ ಶ್ರೇಷ್ಠ ಸಂವಿಧಾನದ ಮೂಲಕ ವಿಶ್ವಕ್ಕೆ ಮಾದರಿಯಾಗಿದ್ದಾರೆ. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಿದರೆ ಅವರ ಜನ್ಮದಿನಾಚರಣೆಗೆ ಅರ್ಥ ಬರುತ್ತದೆ.

 – ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು

Tags:
error: Content is protected !!