ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ ದಶಕಗಳೇ ಕಳೆದಿರುವುದರಿಂದ ಪ್ರತಿವರ್ಷ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಮನೆಗಳು ಜಲಾವೃತವಾಗುವುದರಿಂದ ಬಡ ಜನರು ಹೆಚ್ಚಾಗಿ ಸಂತ್ರಸ್ತರಾಗುತ್ತಿದ್ದಾರೆ.
ಸರ್ಕಾರದ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ(ಈಗ ವಿಬಿಜಿರಾಮ್‌ಜಿ) ಮೊದಲಾದ ಯೋಜನೆಗಳಲ್ಲಿ ನಗರ ಪ್ರದೇಶಗಳಲ್ಲಿರುವ ಕೆರೆಗಳ ಹೂಳನ್ನು ಬೇಸಿಗೆ ಕಾಲದಲ್ಲೇ ತೆರವುಗೊಳಿಸಿ ಸ್ವಚ್ಛವಾಗಿಟ್ಟರೆ ಮಳೆಗಾಲದಲ್ಲಿ ಕೆರೆಗಳಲ್ಲಿ ನೀರು ತುಂಬಿ ಅಂತರ್ಜಲ ಮರುಪೂರಣವಾಗುತ್ತದೆ. ಇದರಿಂದ ಕೃಷಿ ಮೊದಲಾದ ಚಟುವಟಿಕೆಗಳಿಗೂ ಅನುಕೂಲವಾಗುತ್ತದೆ. ಸಂಬಂಧಪಟ್ಟವರು ಈಗಲಾದರೂ ಕೆರೆ ಕಟ್ಟೆಗಳ ಹೂಳು ತೆಗೆಸಲು ಕ್ರಮ ಕೈಗೊಳ್ಳಬೇಕಾಗಿದೆ.
– ರವಿಕಿರಣ್, ಮೈಸೂರು





