Andolana originals

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ ದಶಕಗಳೇ ಕಳೆದಿರುವುದರಿಂದ ಪ್ರತಿವರ್ಷ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಮನೆಗಳು ಜಲಾವೃತವಾಗುವುದರಿಂದ ಬಡ ಜನರು ಹೆಚ್ಚಾಗಿ ಸಂತ್ರಸ್ತರಾಗುತ್ತಿದ್ದಾರೆ.

ಸರ್ಕಾರದ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ(ಈಗ ವಿಬಿಜಿರಾಮ್‌ಜಿ) ಮೊದಲಾದ ಯೋಜನೆಗಳಲ್ಲಿ ನಗರ ಪ್ರದೇಶಗಳಲ್ಲಿರುವ ಕೆರೆಗಳ ಹೂಳನ್ನು ಬೇಸಿಗೆ ಕಾಲದಲ್ಲೇ ತೆರವುಗೊಳಿಸಿ ಸ್ವಚ್ಛವಾಗಿಟ್ಟರೆ ಮಳೆಗಾಲದಲ್ಲಿ ಕೆರೆಗಳಲ್ಲಿ ನೀರು ತುಂಬಿ ಅಂತರ್ಜಲ ಮರುಪೂರಣವಾಗುತ್ತದೆ. ಇದರಿಂದ ಕೃಷಿ ಮೊದಲಾದ ಚಟುವಟಿಕೆಗಳಿಗೂ ಅನುಕೂಲವಾಗುತ್ತದೆ. ಸಂಬಂಧಪಟ್ಟವರು ಈಗಲಾದರೂ ಕೆರೆ ಕಟ್ಟೆಗಳ ಹೂಳು ತೆಗೆಸಲು ಕ್ರಮ ಕೈಗೊಳ್ಳಬೇಕಾಗಿದೆ.

– ರವಿಕಿರಣ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

5 mins ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

7 mins ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

10 mins ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

11 mins ago

ಪೋಕ್ಸೋ ಪ್ರಕರಣ: ಬೇಕು ಮಕ್ಕಳ ಸ್ನೇಹಿ ವಾತಾವರಣ

ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…

13 mins ago

ಮೋದಿ ಮುಂದೆ ಮೌನ ಮುರಿದ ಚಿರಾಗ್ ಚೀರಾಟ!

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…

27 mins ago