ಓದುಗರ ಪತ್ರ
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು ಸಜ್ಜಾಗಿದ್ದಾರೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಹೇಳಿರುವುದು ಶ್ಲಾಘನೀಯ.
ಇತ್ತೀಚೆಗೆ ಮೈಸೂರಿನಲ್ಲಿ ಮಹಾರಾಷ್ಟ್ರ ಪೊಲೀಸರು ಡ್ರಗ್ಸ್ ತಯಾರಿಕ ಫ್ಯಾಕ್ಟರಿಯನ್ನು ಪತ್ತೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಮೈಸೂರನ್ನು ಮಾದಕ ವಸ್ತು ಮುಕ್ತ ನಗರ ಮಾಡುವುದು ನನ್ನ ಮುಖ್ಯ ಆದ್ಯತೆ, ಇದುವರೆಗೆ ಮಾದಕ ವಸ್ತುಗಳ ಮಾರಾಟಗಾರರ ವಿರುದ್ಧ ಮಾತ್ರ ಪ್ರಕರಣ ದಾಖಲಾಗುತ್ತಿತ್ತು. ಇನ್ನು ಮುಂದೆ ಮಾದಕ ವಸ್ತು ಸೇವನೆ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವುದು ಸ್ವಾಗತಾರ್ಹ. ಡ್ರೋನ್ ಕಾರ್ಯಾಚರಣೆಯಿಂದ ೫೦೦ ಮೀ. ದೂರ, ೩೦೦ ಮೀ. ಎತ್ತರದಿಂದ ಅನುಮಾನಾಸ್ಪದ ವ್ಯಕ್ತಿಗಳ ಚಲನ ವಲನ ಸೆರೆ ಹಿಡಿಯಲು ಸಹಕಾರಿಯಾಗುತ್ತದೆ. ತಂತ್ರಜ್ಞಾನವನ್ನು ಸದ್ಬಳಕೆ ಮಾಡಲು ಪೊಲೀಸ್ ಇಲಾಖೆ ಮುಂದಾಗಿರುವುದು ಮೆಚ್ಚುವಂತಹದ್ದು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…