ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ದಸರಾ ಸಿದ್ಧತೆ ಪೂರ್ವಭಾವಿ ಸಭೆಯಲ್ಲಿ ಅವರು ಈ ಬಾರಿಯ ದಸರಾ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಹಸಿರು ನಿಶಾನೆ ತೋರಿಸಿದ್ದಾರೆ. ಮಹಾರಾಜರ ಕಾಲದಿಂದಲೂ ನಡೆದುಕೊಂಡು ಬಂದಿರುವ ಮೈಸೂರು ದಸರಾ ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಪೈಲ್ವಾನರು ಭಾಗ ವಹಿಸುತ್ತಾರೆ.
ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನಡೆ ಯುವ ದಸರಾ ಕುಸ್ತಿ ಪಂದ್ಯಾವಳಿಯನ್ನು ವೀಕ್ಷಿಸಲು ಕಲ್ಲಿನ ಆಸನ (ಗ್ಯಾಲರಿ) ವ್ಯವಸ್ಥೆ ಇದೆ. ಆದರೆ ಮಳೆ ಬಂದರೆ ಮೇಲ್ಚಾವಣಿ ಇಲ್ಲದೇ ಇರುವುದರಿಂದ ಮಳೆಯಲ್ಲಿಯೇ ಕುಸ್ತಿಯನ್ನು ವೀಕ್ಷಿಸಬೇಕಾಗುತ್ತದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಮೇಲ್ಚಾವಣಿ ವ್ಯವಸ್ಥೆ ಕಲಿಸುವ ಮೂಲಕ ವೀಕ್ಷಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು





