Andolana originals

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್ ಅಂಡ್ ಆಡಿಟರ್ ಜನರಲ್ (ಸಿಎಜಿ), ವರದಿ ನೀಡಿದೆ. ರೈಲು ಗಾಡಿಯಲ್ಲಿ ಪ್ರಯಾಣಿಸುವ , ಪ್ರಯಾಣಿಕರಿಗೆ ಇದೊಂದು ಆತಂಕದ ಸಂಗತಿ.

ರೈಲು ಗಾಡಿಯಲ್ಲಿ ಪ್ರಯಾಣಿಸುವ ಬಹುತೇಕ ಮಧ್ಯಮ ವರ್ಗದ ಮತ್ತು ಬಡ ವರ್ಗದ ಪ್ರಯಾಣಿಕರು, ರೈಲು ಇಲಾಖೆಯು ಅಳವಡಿಸಿರುವ ವಾಟರ್ ಕೂಲರ್ ನೀರನ್ನೇ ಕುಡಿಯುತ್ತಾರೆ. ದೇಶಾದ್ಯಂತ ಸುಮಾರು ೬೦೦ ರೈಲ್ವೆ ಪ್ಲಾಟ್ -ರಂಗಳ ವಾಟರ್ ಕೂಲರ್‌ಗಳ ಕುಡಿಯುವ ನೀರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ ನಂತರ ಬಹುತೇಕ ಪ್ಲಾಟ್ -ರ್ಮ್‌ಗಳಲ್ಲಿನ ವಾಟರ್ ಕೂಲರ್‌ಗಳಲ್ಲಿ ಇ-ಕೊಲಿ ಬ್ಯಾಕ್ಟೀರಿಯಾ ದೃಢಪಟ್ಟಿರುವುದನ್ನು ಸಿಎಜಿ ತನ್ನ ವರದಿಯಲ್ಲಿ ನೀಡಿದೆ. ಇಂತಹ ಬ್ಯಾಕ್ಟೀರಿಯಾ ಇರುವ ನೀರನ್ನು ಕುಡಿಯುವುದರಿಂದ, ಅತಿಸಾರ ಮತ್ತು ಕಿಡ್ನಿ ವೈಫಲ್ಯದಂತಹ ಭೀಕರ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಬಹುತೇಕ ಎಲ್ಲ ರೈಲು ಪ್ಲಾಟ್ ಫಾರ್ಮ್‌ಗಳಲ್ಲಿ ಶುದ್ಧ ಕುಡಿಯುವ ನೀರು ಎಂದು ಬೋರ್ಡು ಹಾಕಿರುತ್ತಾರೆ. ಇವರನ್ನು ನಂಬಿ ಜನರು ನೀರು ಕುಡಿಯುತ್ತಾರೆ, ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡಿದರೆ, ಅದಕ್ಕೆ ಯಾರು ಹೊಣೆ ? ಇಷ್ಟು ದಿನಗಳಿಂದ ಇಂತಹ ಇ-ಕೋಲಿ ಬ್ಯಾಕ್ಟೀರಿಯಾ ಇರುವ ನೀರನ್ನು ಕುಡಿದವರ ಗತಿ ಏನು?

 -ಬೂಕನಕೆರೆ ವಿಜೇಂದ್ರ, ಮೈಸೂರು

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

11 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

12 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

18 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

18 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

18 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

18 hours ago