Mysore
28
broken clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

ಓದುಗರ ಪತ್ರ: ವಿದ್ಯುತ್ ದರ ಏರಿಕೆ ಜನಸಾಮಾನ್ಯರಿಗೆ ಶಾಕ್

ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್‌ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿರುವುದು ಆತಂಕಕಾರಿ ವಿಷಯ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದು ಗಾಯದ ಮೇಲೆ ಬರೆ ಎಳೆದಂತಿದೆ. ಸರ್ಕಾರವು ಒಂದು ಕಡೆ ಉಚಿತ ವಿದ್ಯುತ್ ಯೋಜನೆ ನೀಡುತ್ತಿದ್ದರೆ ಮತ್ತೊಂದೆಡೆ ಇಂಧನ ಹೊಂದಾಣಿಕೆ ಹಾಗೂ ಸ್ಥಿರ ಶುಲ್ಕದ ಹೆಸರಿನಲ್ಲಿ ದರ ಏರಿಕೆ ಮಾಡುತ್ತಿರುವುದು ಸರಿಯಲ್ಲ. ಬೆಸ್ಕಾಂ ಒಂದೇ ರೂ.೨,೮೦೦ ಕೋಟಿ ನಷ್ಟ ಅನುಭವಿಸಲು ಇಲಾಖೆಯ ನಿರ್ವಹಣಾ ವೈಫಲ್ಯ ಮತ್ತು ಅದಕ್ಷತೆ ಕಾರಣವೇ ಹೊರತು ಪ್ರಾಮಾಣಿಕ ಗ್ರಾಹಕರಲ್ಲ. ಕೈಗಾರಿಕಾ ಮತ್ತು ವಾಣಿಜ್ಯ ವಲಯದ ಮೇಲಿನ ಈ ಹೊರೆ ಅಂತಿಮವಾಗಿ ಬೆಲೆ ಏರಿಕೆಗೆ ದಾರಿಯಾಗುತ್ತದೆ. ಸಾರ್ವಜನಿಕ ಅಭಿಪ್ರಾಯ ಸಂಗ್ರಹದ ಹೆಸರಿನಲ್ಲಿ ಈ ಪ್ರಸ್ತಾವನೆಯನ್ನು ಅಂಗೀಕರಿಸಬಾರದು. ಸರ್ಕಾರವು ಎಸ್ಕಾಂಗಳ ಸೋರಿಕೆ ತಡೆಗಟ್ಟಿ ನಷ್ಟವನ್ನು ಸರಿದೂಗಿಸುವ ಪರ್ಯಾಯ ಮಾರ್ಗಗಳನ್ನು ಹುಡುಕಬೇಕು.

 -ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

Tags:
error: Content is protected !!