ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್‌ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿರುವುದು ಆತಂಕಕಾರಿ ವಿಷಯ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದು ಗಾಯದ ಮೇಲೆ ಬರೆ ಎಳೆದಂತಿದೆ. ಸರ್ಕಾರವು ಒಂದು ಕಡೆ ಉಚಿತ ವಿದ್ಯುತ್ ಯೋಜನೆ ನೀಡುತ್ತಿದ್ದರೆ ಮತ್ತೊಂದೆಡೆ ಇಂಧನ ಹೊಂದಾಣಿಕೆ ಹಾಗೂ ಸ್ಥಿರ ಶುಲ್ಕದ ಹೆಸರಿನಲ್ಲಿ ದರ ಏರಿಕೆ ಮಾಡುತ್ತಿರುವುದು ಸರಿಯಲ್ಲ. ಬೆಸ್ಕಾಂ ಒಂದೇ ರೂ.೨,೮೦೦ ಕೋಟಿ ನಷ್ಟ ಅನುಭವಿಸಲು ಇಲಾಖೆಯ ನಿರ್ವಹಣಾ ವೈಫಲ್ಯ ಮತ್ತು ಅದಕ್ಷತೆ ಕಾರಣವೇ ಹೊರತು ಪ್ರಾಮಾಣಿಕ ಗ್ರಾಹಕರಲ್ಲ. ಕೈಗಾರಿಕಾ ಮತ್ತು ವಾಣಿಜ್ಯ ವಲಯದ ಮೇಲಿನ ಈ ಹೊರೆ ಅಂತಿಮವಾಗಿ ಬೆಲೆ ಏರಿಕೆಗೆ ದಾರಿಯಾಗುತ್ತದೆ. ಸಾರ್ವಜನಿಕ ಅಭಿಪ್ರಾಯ ಸಂಗ್ರಹದ ಹೆಸರಿನಲ್ಲಿ ಈ ಪ್ರಸ್ತಾವನೆಯನ್ನು ಅಂಗೀಕರಿಸಬಾರದು. ಸರ್ಕಾರವು ಎಸ್ಕಾಂಗಳ ಸೋರಿಕೆ ತಡೆಗಟ್ಟಿ ನಷ್ಟವನ್ನು ಸರಿದೂಗಿಸುವ ಪರ್ಯಾಯ ಮಾರ್ಗಗಳನ್ನು ಹುಡುಕಬೇಕು.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…
ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ…
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ಮೌಲ್ಯದ ಡ್ರಗ್ಸ್ ಅನ್ನು ಅಧಿಕಾರಿಗಳು…
ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…