ಓದುಗರ ಪತ್ರ
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಕಳೆದ ವರ್ಷ ಐದು ವರ್ಷ ಐದು ತಿಂಗಳಿಗೆ ಒಂದನೇ ತರಗತಿಯ ಪ್ರವೇಶ ಎಂದು ಅನುಮತಿ ನೀಡಿದ್ದರು. ಆದರೆ ಈ ವರ್ಷ ಮತ್ತೆ ಆರು ವರ್ಷ ವಯೋಮಿತಿಯನ್ನು ಕಡ್ಡಾಯಗೊಳಿಸಿದ್ದಾರೆ. ಇದು ಬೇಸರದ ಸಂಗತಿಯಾಗಿದೆ. ಆರು ವರ್ಷಕ್ಕಿಂತ ಕೆಲವು ತಿಂಗಳ ಅಂತರದಿಂದ ಮತ್ತೆ ಹಿಂದಿನ ತರಗತಿಯಲ್ಲಿ ಉಳಿಯುತ್ತಾರೆ. ಇದರಿಂದ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಕಲಿಕೆಯಲ್ಲಿ ತೊಂದರೆ ಇದ್ದರೆ ತಡೆ ಹಿಡಿದರೆ ಅಡ್ಡಿ ಇಲ್ಲ. ಆದರೆ ಎಲ್ಲಾ ಮಕ್ಕಳು ಜೂನ್ ತಿಂಗಳಲ್ಲಿ ಆರು ವರ್ಷ ತುಂಬುವ ಹಾಗೆ ಜನಿಸಲು ಸಾಧ್ಯವಾ? ಆರು ವರ್ಷ ವಯೋಮಿತಿ ಕಡ್ಡಾಯಗೊಳಿಸಿರುವುದರಿಂದ ಮಕ್ಕಳು ಶಾಲೆಯಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಾಗಿರುತ್ತದೆ. ಶಿಕ್ಷಣ ಸಚಿವರು ಈ ನಿಟ್ಟಿನಲ್ಲಿ ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಈ ಮೊದಲಿನಂತೆ ಶಾಲಾ ದಾಖಲಾತಿಯ ವಯೋಮಿತಿಯನ್ನು ನಿಗದಿಮಾಡಬೇಕು
-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…